ಸುದ್ದಿ

11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಗಿರುವ 3 ಅಂತಸ್ತಿನ ಮನೆ ಹೇಗಿದೆ ಗೊತ್ತಾ,ನೋಡಿದರೆ ಅಚ್ಚರಿ ಪಡುವುದು ಗ್ಯಾರಂಟಿ,.!

46

ಜೀವನದಲ್ಲಿ ಎಲ್ಲರೂ  ತಮಗೆ ಸ್ವಂತ  ಮನೆಯನ್ನು  ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ.  ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ.

ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು. 2017ರಲ್ಲಿ 11 ಕಂಟೇನರ್ ಗಳನ್ನು ಬಳಸಿ ಮೂರು ಅಂತಸ್ತಿನ ಮನೆ ಕಟ್ಟಿದ್ದರು. ಅಂದು ಸಹ ವಿಲ್ ಮನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದವು. ಅಂದು ಮನೆ ನಿರ್ಮಿಸಿದ್ದ ವಿಲ್ ಹಣದ ಅಡಚಣೆಯಿಂದಾಗಿ ಒಳಾಂಗಣ ವಿನ್ಯಾಸ ಮಾಡಿಸಿರಲಿಲ್ಲ. ಎರಡು ವರ್ಷಗಳ ಬಳಿಕ ಮನೆಯನ್ನು ಅಲಂಕರಿಸಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಲ್ ಬ್ರೆಕ್ಸ್, 2017ರಲ್ಲಿ ಮನೆ ನಿರ್ಮಾಣವಾಗಿತ್ತು. ಅಂದು ಮನೆಯ ಒಳಾಂಗಣ ಸುಂದರಗೊಳಿಸಲು ನನ್ನ ಬಳಿ ಹಣ ಇರಲಿಲ್ಲ. ಹಾಗಾಗಿ ಪ್ರತಿನಿತ್ಯ ನಿಧಾನವಾಗಿ ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸ ತೊಡಗಿದೆ. ಸದ್ಯ ಮನೆ ಪೂರ್ಣಗೊಂಡಿದ್ದು, ಫೋಟೋಗಳು ವೈರಲ್ ಆಗುತ್ತಿವೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ಮನೆ ಸದೃಡವಾಗಿದ್ದು, ಮಳೆ-ಗಾಳಿಯನ್ನು ಎದುರಿಸಬಲ್ಲದು. ಮನೆಯ ಒಳಗಡೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಮೊದಲು ಫೋಟೋಗಳ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದರು. ಹಾಗಾಗಿ ಫೋಟೋಗಳ ಕೆಳಗೆ ಮನೆಯ ಮಾಹಿತಿ ನೀಡಲು ಆರಂಭಿಸಿದೆ ಎಂದು ವಿಲ್ ಬ್ರೇಕ್ಸ್ ಹೇಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ