News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
Sports

ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

22

ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು.

ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ ಇಂಡಿಯಾ ಒಡ್ಡಿದ್ದ 337 ರನ್ ಟಾರ್ಗೆಟ್ ಬೆನ್ನತ್ತಿದ ಪಾಕಿಸ್ತಾನ ಆಟಕ್ಕೆ ಮಳೆಯೂ ಅಡ್ಡಿಯಾಗಿತ್ತು. ಮಳೆ ನಿಂತು ಮತ್ತೆ ಪಂದ್ಯ ಪ್ರಾರಂಭವಾದಾಗ ಡೆಕ್ವರ್ತ್ ನಿಯಮದ ಪ್ರಕಾರ ಪಾಕ್‍ಗೆ ಗೆಲ್ಲಲು 30 ಎಸೆತಗಳಲ್ಲಿ 136ರನ್ ಟಾರ್ಗೆಟ್ ನೀಡಲಾಗಿತ್ತು. ಕೊನೆಗೆ ಭಾರತಕ್ಕೆ 86 ರನ್‍ಗಳ ರೋಚಕ ಗೆಲುವು ಸಿಕ್ಕಿದೆ.


ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಟೀಂ ಇಂಡಿಯಾ ಬೌಲರ್ ಗಳ ಅಬ್ಬರಕ್ಕೆ ಪಾಕ್ ತತ್ತರ ಇತ್ತ ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ಸಿಲಿಕಾನ್ ಸಿಟಿಯಲ್ಲೂ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮನೆ, ಅಂಗಡಿ, ಹೊಟೇಲುಗಳಲ್ಲಿ ಜನ ಉಸಿರು ಬಿಗಿ ಹಿಡಿದು ಪಂದ್ಯ ವೀಕ್ಷಿಸಿದ್ರು. ಕೊನೆಗೆ ಪಾಕಿಗಳ ಹುಟ್ಟಡಗಿಸಿದ ಭಾರತ ತಂಡ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.

ಧಾರವಾಡದಲ್ಲಿಯೂ ಅಭಿಮಾನಿಗಳು ಭಾರತ್ ಮಾತಾಕಿ ಜೈ ಘೋಷಣೆಗಳೊಂದಿಗೆ ನಡುರಾತ್ರಿಯಲ್ಲಿಯೂ ಪಟಾಕಿ ಸಿಡಿಸಿ ಜೈ ಘೋಷ ಹಾಕಿದ್ರು.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ