ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು.
ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ ನಾಯಕರ ಕೈವಾಡವಿದೆ ಎಂದು ದೂರಿದರು.ನಾವು ಹೋಟೆಲ್‍ನಲ್ಲಿ ರೂಮ್ ಬುಕ್ ಮಾಡಿದ್ವಿ. ಆದರೆ ಇದ್ದಕ್ಕಿದ್ದಂತೆ ರೂಮ್ ಕ್ಯಾನ್ಸಲ್ ಮಾಡಿದ್ದಾರೆ. ಇತ್ತ ನಮ್ಮ ಶಾಸಕರನ್ನು ಭೇಟಿ ಮಾಡಲು ಮಹಾರಾಷ್ಟ್ರ ಪೊಲೀಸರು ಅವಕಾಶ ಮಾಡಿಕೊಡುತ್ತಿಲ್ಲ. ಹೀಗಾಗಿ ಇದರ ಹಿಂದೆ ಬಿಜೆಪಿ ನಾಯಕರಿದ್ದಾರೆ.
ಡಿ.ಕೆ.ಶಿವಕುಮಾರ್ ಅವರನ್ನು ಯಾವುದಾದರೂ ಠಾಣೆಗೆ ಅಥವಾ ಜೈಲಿಗೆ ಕರೆದುಕೊಂಡು ಹೋಗಿರುತ್ತಾರೆ. ಏನ್ ಮಾಡೋಕೆ ಆಗುತ್ತೆ, ಎಲ್ಲವನ್ನು ಅನುಭವಿಸಬೇಕು. ಬಿಜೆಪಿ ಅವರು ಇನ್ನೂ ಏನೇನು ಮಾಡುತ್ತಾರೆ ಎಂದು ಕಾದು ನೋಡಬೇಕಿದೆ. ಇದೆಲ್ಲದಕ್ಕೂ ಬಿಜೆಪಿ ನಾಯಕರ ಅಧಿಕಾರದ ದಾಹವೇ ಕಾರಣ ಎಂದು ಸುರೇಶ್ ಆರೋಪಿಸಿದರು.ನಾನು ಫೋನ್ ಮಾಡಿದಾಗ ಈ ರೀತಿ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು ಅಷ್ಟೇ.
ಹೀಗಾಗಿ ಮಳೆ, ಗಾಳಿ, ಚಳಿ, ಬಿಸಿಲು ಏನೇ ಆದರೂ ಎಲ್ಲದಕ್ಕೂ ಸಿದ್ಧವಾಗಿದ್ದೇವೆ ಎಂದು ಕೋಪದಿಂದ ಸುರೇಶ್ ಹೇಳಿದರು.ಇದು ಪಕ್ಷದ ಅಸ್ಥಿತ್ವದ ಪ್ರಶ್ನೆ. ಮುಂಬೈನಲ್ಲಿರುವ ಅತೃಪ್ತ ಶಾಸಕರು ಕಾಂಗ್ರೆಸ್ ಪಕ್ಷವನ್ನು ಕಷ್ಟಪಟ್ಟು ಕಟ್ಟಿದ್ದಾರೆ. ಹೀಗಾಗಿ ಅಂತಹವರು ಈ ರೀತಿ ರಾಜೀನಾಮೆ ನೀಡಿದ್ದಾರೆ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ. ಅವರು ಒತ್ತಡದಲ್ಲಿ ಮಾತನಾಡುತ್ತಿದ್ದಾರೆ. ಅವರು ಕೂಡ ನಾವು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್‍ನವರು ಹೋಗಿ ಮಾತನಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…