inspirational

ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

By admin

October 30, 2019

ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು.

ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.

”ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.” ಎಂದು ಟ್ವೀಟ್ ಮಾಡಿದ್ದಾರೆ.

”ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ” ಎಂದು ದರ್ಶನ್ ಹೇಳಿದ್ದಾರೆ.