ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು.
ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ.
ಈ ಚಿತ್ರದ ನಂತರ ಕನ್ನಡ ಚಿತ್ರರಂಗದ ಹೈ ಬಜೆಟ್ ಮತ್ತು ಬಹು ನಿರೀಕ್ಷಿತ ಪೌರಾಣಿಕ ಚಿತ್ರ ಚಾಲೆಂಜಿಂಗ್ ಸ್ಟಾರ್ ಅಭಿನಯದ ಕುರುಕ್ಷೇತ್ರ ಚಿತ್ರ ಬಿಡುಗಡೆಯಾಗುವ ಸೂಚನೆಯನ್ನು ಚಿತ್ರ ತಂಡ ಕೊಟ್ಟಿದ್ದು ದಚ್ಚು ಅಭಿಮಾನಿಗಳು ಈ ಚಿತ್ರವನ್ನು ನೋದಲು ಕಾತುರದಿಂದ ಕಾಯುತ್ತಿದ್ದಾರೆ.
ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿರುವ ‘ಕುರುಕ್ಷೇತ್ರ’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 5 ರಂದು ‘ಕುರುಕ್ಷೇತ್ರ’ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಮುನಿರತ್ನ ಘೋಷಿಸಿದ್ದಾರೆ.
ಚಿತ್ರ ತಡವಾಗಿ ಬಿಡುಗಡೆ ಮಾಡುತ್ತಿರುವುದಕ್ಕೆ ಕಾರಣ ನೀಡಿದ ಅವರು, ಕಂಪ್ಯೂಟರ್ ಗ್ರಾಫಿಕ್ಸ್ ಕೆಲಸ ಅಂದುಕೊಂಡಂತೆ ಬರುತ್ತಿಲ್ಲ. ಪದೇ ಪದೇ ರೀ ವರ್ಕ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಹೈ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಕುರುಕ್ಷೇತ್ರದಲ್ಲಿ ದರ್ಶನ್, ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಇದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…