ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ.
ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ, ಸಂತೋಷ, ಪ್ರೀತಿನೂ ಬರುತ್ತೆ. ನಮ್ಮ ಬಗ್ಗೆ ಏನೇ ಮಾತನಾಡಿದರೂ ಕೋಪ ಮಾಡಿಕೊಳ್ಳಲ್ಲ, ಬೇಜಾರು ಮಾಡಿಕೊಳ್ಳಲ್ಲ, ನೋವು ಆಗಲ್ಲ. ಯಾರಿಗೂ ಏನೂ ಅನ್ನಲ್ಲ. ಅಮ್ಮನ ಪರವಾಗಿ ಇಂದಿನಿಂದಲೇ ನಮ್ಮ ಪರೇಡ್ ಶುರುವಾಗಿದೆ. ನಿಮ್ಮ ಸೌಂಡ್ ಕೂಡ ಹೀಗೇನೆ ಇರಬೇಕು ಎಂದು ಹೇಳಿದ್ದಾರೆ.
ಕೆ.ಆರ್. ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಅವರು, ನಮ್ಮ ಸರ್ಕಾರ ಇದೆ. ನಟರ ಅಕ್ರಮದ ತನಿಖೆ ನಡೆಸುತ್ತೇವೆ. ನಟರು ಪ್ರಚಾರಕ್ಕೆ ಬಂದು ಜೆಡಿಎಸ್ ವಿರುದ್ಧ ಮಾತನಾಡಬಾರದು ಎಂದೆಲ್ಲಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ರೂಪದಲ್ಲಿ ಮಾತನಾಡಿದ ದರ್ಶನ್, ನಮ್ಮ ಬಗ್ಗೆ ಯಾರು ಏನೇ ಮಾತನಾಡಿದರೂ, ನಾವು ಬೇಜಾರು ಮಾಡಿಕೊಳ್ಳುವುದಿಲ್ಲ.
ಕೋಪ ಮಾಡಿಕೊಳ್ಳುವುದಿಲ್ಲ. ಯಾರಿಗೂ ಏನೂ ಹೇಳುವುದಿಲ್ಲ. ನಮಗೆ ಮಂಡ್ಯ ಜನರ ಆಶೀರ್ವಾದ ಬೇಕಾಗಿದೆ. ಮಂಡ್ಯ ಜನ ಪಂಚೆ ಎತ್ತಿ ಕಟ್ಟಿ ನಿಂತರೆ ಏನೆಲ್ಲಾ ಆಗುತ್ತದೆ ಎಂಬುದನ್ನು ನಾನು ಬಲ್ಲೆ ಎಂದು ದರ್ಶನ್ ಹೇಳಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.