ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ.
ಇದರ ನಡುವೆಯೇ ನಗರದ ಖಾಸಗಿ ಹೋಟೆಲಿನಲ್ಲಿ ನಡೆದ ‘ಯಜಮಾನ’ ಚಿತ್ರದ ಸಕ್ಸಸ್ ಪ್ರೆಸ್ಮೀಟ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ದರ್ಶನ್, ಅಂಬರೀಶ್ ಅವರು ಚುನಾವಣೆಗೆ ನಿಂತಾಗಲೂ ಪ್ರಚಾರಕ್ಕೆ ಹೋಗಿದ್ದೇನೆ. ಈಗಲೂ ಹೋಗುತ್ತೀನಿ. ಸುಮಲತಾ ಪರ ಪ್ರಚಾರ ಮಾಡುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.
ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಸ್ಪರ್ಧಿಸಿ, ಚುನಾವಣಾ ಪ್ರಚಾರಕ್ಕೆ ಕರೆದರೆ ನಾನು ಹೋಗುತ್ತೇನೆ. ಅಲ್ಲದೆ ಚುನಾವಣೆಯಲ್ಲಿ ಸ್ಪರ್ಧಿಸಿದ ಸ್ನೇಹಿತರು ಯಾರೇ ಕರೆದರೂ ಪ್ರಚಾರಕ್ಕೆ ಹೋಗುತ್ತೇನೆ ಎಂದು ಇದೇ ವೇಳೆ ದರ್ಶನ್ ತಿಳಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಸುಮಲತಾ ಅಂಬರೀಶ್ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…