ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ.
2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಈ ಕಟ್ಟಡವನ್ನು ನಿರ್ಮಾಣ ಮಾಡಿತ್ತು. 5 ಕೋಟಿ ವೆಚ್ಚದಲ್ಲಿ ಆರಂಭವಾಗಿದ್ದ ಈ ಕಟ್ಟಡ, ಕಾಮಗಾರಿ ಪೂರ್ಣಗೊಂಡಾಗ 8 ಕೋಟಿ ವೆಚ್ಚ ವ್ಯಯಿಸಲಾಗಿತ್ತು. ಚಂದ್ರ ಬಾಬು ಅವರು ಈ ಕಟ್ಟಡವನ್ನು ಅವರು ಪಕ್ಷದ ಕಾರ್ಯಕರ್ತರು ಮತ್ತು ಜನರನ್ನು ಭೇಟಿಯಾಗಲು ಉಪಯೋಗಿಸುತ್ತಿದ್ದರು. ಆದರೆ ಈ ಕಟ್ಟಡ ಅಕ್ರಮವಾಗಿದ್ದರಿಂದ ಜಗನ್ ಧ್ವಂಸಗೊಳಿಸಲು ಆದೇಶ ನೀಡಿದ್ದರು.
2017ರಲ್ಲಿ ನಾಯ್ಡು ಮನೆ ಸಮೀಪದಲ್ಲೇ 8 ಕೋಟಿ ರೂ. ವೆಚ್ಚದಲ್ಲಿ ಈ ವೇದಿಕೆ ನಿರ್ಮಿಸಿದ್ದರು. ಮುಖ್ಯಮಂತ್ರಿ ಆದ ನಂತರ ಜಗನ್ ಮೊದಲ ಬಾರಿಗೆ ಪ್ರಜಾ ವೇದಿಕೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆಯನ್ನೂ ನಡೆಸಿದ್ದರು. ಈ ವೇಳೆ, ಇದೇ ಕೊನೇ ಸಭೆ. ಪಾರದರ್ಶಕತೆ ನಿಟ್ಟಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿರುವ ಈ ಕಟ್ಟಡವನ್ನು ಧ್ವಂಸಗೊಳಿಸಬೇಕು ಎಂದು ಹೇಳಿದ್ದರು.
ಕೆಲ ವಾರಗಳ ಹಿಂದೆಯಷ್ಟೇ ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ನೀಡಿದ್ದ ಝಡ್ ಪ್ಲಸ್ ಭದ್ರತೆಯನ್ನು ಸರ್ಕಾರ ವಾಪಸ್ ಪಡೆಯಲಾಗಿತ್ತು. ಇತ್ತ ಜೂನ್ 4 ರಂದು ಪ್ರಜಾ ವೇದಿಕಾ ಬಳಿ ಇರುವ ಮನೆಯಲ್ಲೇ ಇರಲು ಅವಕಾಶ ಕೊಡುವಂತೆ ನಾಯ್ಡು ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಅಲ್ಲದೇ `ಪ್ರಜಾ ವೇದಿಕಾ’ ಹಾಲ್ ಅನ್ನು ಪಕ್ಷದ ಕಾರ್ಯಗಳನ್ನು ನಡೆಸಲು ಬಳಕೆ ಮಾಡಲು ನೀಡಬೇಕೆಂದು ಪತ್ರದಲ್ಲಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಜಗನ್ ಸರ್ಕಾರ ಕೃಷ್ಣ ನದಿಯ ತಟದಲ್ಲಿ ನಿರ್ಮಾಣ ಮಾಡಿರುವ ಈ ಮನೆಯೂ ಕೂಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…