ರಾಜಕೀಯ

ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

96

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ.

ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ದೇವೇಗೌಡ ಹಾಗೂ ಸಿದ್ದರಾಮಯ್ಯ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಜಂಟಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಇದಕ್ಕೂ ಮುನ್ನ ದೇವೇಗೌಡರು ಈ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ