ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು.
ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು ಓಪನ್ ಚಾಲೆಂಜ್ ಹಾಕಿರುವುದು ಯಾರಿಗೆ ಎನ್ನುವುದು ಭಾರಿ ಕುತೂಹಲ ಮೂಡಿಸಿದೆ. ಯಾವತ್ತೂ ದರ್ಶನ್ ಇಷ್ಟು ಓಪನ್ ಆಗಿ ಏನನ್ನೂ ಹೇಳಿಕೊಂಡಿರಲಿಲ್ಲ. ಅವರ ಮನಸಿಗೆ ನೋವಾಗುವ ಘಟನೆ ನಡೆದಿದ್ದು, ಇದಕ್ಕೆ ನೇರವಾಗಿ ಉತ್ತರ ನೀಡಲು ಓಪನ್ ಚಾಲೆಂಜ್ ಹಾಕಿರಬಹುದೆಂದು ಹೇಳಲಾಗಿದೆ.
ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್ ಲೈವ್ ಬರ್ತೀನಿ ಬಂದಾಗ ಎಲ್ಲಾನು ತಿಳಿಸುತ್ತೇನೆ. ನಿಮ್ಮ ದಾಸ ದರ್ಶನ್ ಎಂದು ಬರೆದು ಡಿ ಬಾಸ್ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.
ದರ್ಶನ್ ತಮ್ಮ ಕುರುಕ್ಷೇತ್ರ ಸಿನಿಮಾ ಕುರಿತು ಚಾಲೆಂಜ್ ಹಾಕುತ್ತಾರಾ ಅಥವಾ ಬೇರೆ ವಿಚಾರದ ಬಗ್ಗೆ ಚಾಲೆಂಜ್ ಹಾಕುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.ಸೋಮವಾರ ದರ್ಶನ್, ಕುರುಕ್ಷೇತ್ರ ಎನ್ನುವುದು ಬಹುತಾರಾಗಣದ ಚಿತ್ರ. ಎಲ್ಲರನ್ನು ಸಮಾನಕಾರವಾಗಿ ಕಾಣಬೇಕೆಂಬ ಸದುದ್ದೇಶದಿಂದ ಯಾವ ತಾರೆಯ ಫೋಟೋಗಳನ್ನು ಪಾಸ್ ಗಳ ಮೇಲೆ ಪ್ರಿಂಟ್ ಮಾಡಿಲ್ಲ. ಇಂತಹ ಚಿಕ್ಕ ವಿಷಯಗಳಿಗೆಲ್ಲ ಬೇಸರವನ್ನು ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ. ಚಿತ್ರದಲ್ಲಿ ಎಲ್ಲರಿಗೂ ತಕ್ಕ ನ್ಯಾಯವನ್ನು ಒದಗಿಸಲಾಗಿದೆ. ಆರಾಮಾಗಿ ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಳ್ಳಿ ಎಂದು ಬರೆದು ಟ್ವೀಟ್ ಮಾಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್ನಿಂದ ಹೊಡಿಬೇಕಾ? ಅಥವಾ ಗ್ಯಾಸ್ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…