News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಸುದ್ದಿ

ಬಿಗ್ ಬ್ರೇಕಿಂಗ್ ನ್ಯೂಸ್ : ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್…!

99

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು.

ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು ಓಪನ್ ಚಾಲೆಂಜ್ ಹಾಕಿರುವುದು ಯಾರಿಗೆ ಎನ್ನುವುದು ಭಾರಿ ಕುತೂಹಲ ಮೂಡಿಸಿದೆ. ಯಾವತ್ತೂ ದರ್ಶನ್ ಇಷ್ಟು ಓಪನ್ ಆಗಿ ಏನನ್ನೂ ಹೇಳಿಕೊಂಡಿರಲಿಲ್ಲ. ಅವರ ಮನಸಿಗೆ ನೋವಾಗುವ ಘಟನೆ ನಡೆದಿದ್ದು, ಇದಕ್ಕೆ ನೇರವಾಗಿ ಉತ್ತರ ನೀಡಲು ಓಪನ್ ಚಾಲೆಂಜ್ ಹಾಕಿರಬಹುದೆಂದು ಹೇಳಲಾಗಿದೆ.

ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್‍ಬುಕ್ ಲೈವ್ ಬರ್ತೀನಿ ಬಂದಾಗ ಎಲ್ಲಾನು ತಿಳಿಸುತ್ತೇನೆ. ನಿಮ್ಮ ದಾಸ ದರ್ಶನ್ ಎಂದು ಬರೆದು ಡಿ ಬಾಸ್ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.

ದರ್ಶನ್ ತಮ್ಮ ಕುರುಕ್ಷೇತ್ರ ಸಿನಿಮಾ ಕುರಿತು ಚಾಲೆಂಜ್ ಹಾಕುತ್ತಾರಾ ಅಥವಾ ಬೇರೆ ವಿಚಾರದ ಬಗ್ಗೆ ಚಾಲೆಂಜ್ ಹಾಕುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.ಸೋಮವಾರ ದರ್ಶನ್, ಕುರುಕ್ಷೇತ್ರ ಎನ್ನುವುದು ಬಹುತಾರಾಗಣದ ಚಿತ್ರ. ಎಲ್ಲರನ್ನು ಸಮಾನಕಾರವಾಗಿ ಕಾಣಬೇಕೆಂಬ ಸದುದ್ದೇಶದಿಂದ ಯಾವ ತಾರೆಯ ಫೋಟೋಗಳನ್ನು ಪಾಸ್ ಗಳ ಮೇಲೆ ಪ್ರಿಂಟ್ ಮಾಡಿಲ್ಲ. ಇಂತಹ ಚಿಕ್ಕ ವಿಷಯಗಳಿಗೆಲ್ಲ ಬೇಸರವನ್ನು ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ. ಚಿತ್ರದಲ್ಲಿ ಎಲ್ಲರಿಗೂ ತಕ್ಕ ನ್ಯಾಯವನ್ನು ಒದಗಿಸಲಾಗಿದೆ. ಆರಾಮಾಗಿ ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಳ್ಳಿ ಎಂದು ಬರೆದು ಟ್ವೀಟ್ ಮಾಡಿದ್ದರು.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ