ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ.
ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ ಸಿಗುವುದಿಲ್ಲ.
ರೇಷನ್ ಕಾರ್ಡ್ ನಲ್ಲಿ ಹೆಸರು ಹೊಂದಿರುವ ಪ್ರತಿಯೊಬ್ಬರೂ ಜುಲೈ 31 ರೊಳಗೆ ಆಧಾರ್ ದೃಡೀಕರಣ ಮಾಡಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆದೇಶ ಹೊರಡಿಸಿದೆ.
ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸಲು ಯಾವುದೇ ರೀತಿಯ ಹಣ ಕೊಡಬೇಕಾಗಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಪಡಿತರ ಪಡೆಯುವ ಎಲ್ಲಾ ನ್ಯಾಯಬೆಲೆ(ರೇಷನ್ ಶಾಪ್) ಅಂಗಡಿಗಳಲ್ಲಿ ಆಧಾರ್ ಧೃಡೀಕರಣ ಮಾಡಿಸಿಕೊಳ್ಳಬಹುದಾಗಿದೆ.
ಜುಲೈ 31ರ ಒಳಗೆ ರೇಷನ್ ಕಾರ್ಡ್ ನಲ್ಲಿ ಹೆಸರು ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರು ನ್ಯಾಯಬೆಲೆ ಅಂಗಡಿಗೆ ಹೋಗಿ ಖಡ್ಡಾಯವಾಗಿ ಬಯೋಮೆಟ್ರಿಕ್ ನೀಡಬೇಕಿದೆ. ಬಯೋಮೆಟ್ರಿಕ್ ನೀಡಿದವರಿಗೆ ಮಾತ್ರ ರೇಷನ್ ಸಿಗಲಿದೆ ಎಂದು ಹೇಳಲಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.