ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ!

ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು 300 ಕುಟುಂಬಗಳು ಈಗ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ,”ನಮ್ಮ ಮನೆ ಪ್ರವಾಹದಲ್ಲಿ ಕೊಚ್ಚಿ ಹೋದ ಕಾರಣ ಇರಲು ಸೂರಿಲ್ಲ. ತಿನ್ನಲು ಸೂಕ್ತ ಆಹಾರ ಸಿಗುತ್ತಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳೂ ದೊರೆತಿಲ್ಲ. ಹಾಗಾಗಿ ಇಲಿಗಳನ್ನು ಹಿಡಿದು ತಿನ್ನುವಂತಹ ದುಸ್ಥಿತಿ ಎದುರಾಗಿದೆ” ಎಂದು ಸ್ಥಳೀಯ ತಲ್ಲಾ ಮುರ್ಮೂರ್ ಎಎನ್ಐಗೆ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡ್ವಾ ಕ್ಷೇತ್ರದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ರಾಕೇಶ್ ಕುಮಾರ್ ಗುಪ್ತಾ, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಗ್ರಾಮಸ್ಥರ ಸ್ಥಿತಿಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಅವರು ಇಲಿಗಳನ್ನು ತಿನ್ನುತ್ತಿದ್ದರೂ ಸಹ, ಬುಡಕಟ್ಟು ಜನಾಂಗದವರಾದ್ದರಿಂದ ಅದನ್ನು ತಿನ್ನುತ್ತಿರಬಹುದು ಎಂದಿದ್ದಾರೆ.ಏತನ್ಮಧ್ಯೆ, ಕಾಂಗ್ರೆಸ್ ಶಾಸಕ ಶಕೀಲ್ ಅಹ್ಮದ್ ಖಾನ್ ಅವರು ಈ ಗ್ರಾಮದ ಜನರ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಗ್ರಾಮಸ್ಥರಿಗೆ ನೆರವು ನೀಡುವಂತೆ ಕೋರಿದ್ದಾರೆ.

ಕಳೆದ ಕೆಲ ದಿನಗಳಿಂದ ಬಿಹಾರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳ ನೀರಿನ ಮಟ್ಟ ಏರುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರಿ ಮಳೆಯಿಂದಾಗಿ ಬಿಹಾರದ ಅರೇರಿಯಾ, ದರ್ಭಂಗಾ ಮತ್ತು ಮಧುಬನಿ ಜಿಲ್ಲೆಗಳ ಅನೇಕ ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…