ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ ನೀಡಿದೆ.
ನೇರವಾಗಿ ಎರಡನೇ ವರ್ಷಕ್ಕೆ ಸೇರುವ ವಿದ್ಯಾರ್ಥಿಗಳು ಡಿಪ್ಲೊಮಾ ಮೊದಲನೇ ವರ್ಷದಲ್ಲಿ ಇರುವ ತಾಂತ್ರಿಕ ವಿಷಯಗಳಲ್ಲಿ ಪರಿಣತಿ ಹೊಂದಿರುವುದಿಲ್ಲ. ಈ ಕಾರಣ ಕ್ಕಾಗಿ ಅಂತಹ ವಿದ್ಯಾರ್ಥಿಗಳಿಗೆ ತಾಂತ್ರಿಕ ಮಾಹಿತಿ ನೀಡಲು ಬ್ರಿಡ್ಜ್ ಕೋರ್ಸ್ ನೀಡಲಾಗುತ್ತದೆ ಎಂದು ಇಲಾಖೆಯ ಅಧಿಕಾರಿ ಯೊಬ್ಬರು ಮಾಹಿತಿ ನೀಡಿದರು.
ಸಮಿತಿ ರಚನೆ
ಬ್ರಿಡ್ಜ್ ಕೋರ್ಸ್ ಹೇಗಿರಬೇಕು ಎಂಬುದಕ್ಕೆ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಒಳಗೊಂಡಿರುವ ತಜ್ಞರ ಸಮಿತಿಯನ್ನು ರಚನೆ ಮಾಡಲಾಗಿದೆ. ಸಿವಿಲ್ ಎಂಜಿನಿಯರಿಂಗ್, ಪರಿಸರ ವಿಜ್ಞಾನ, ಪಿಎಚ್ಇ, ವಾಟರ್ ಟೆಕ್ನಾಲಜಿ ಮತ್ತು ಆರೋಗ್ಯ ವಿಜ್ಞಾನ ಬ್ರಿಡ್ಜ್ ಕೋರ್ಸ್ಗೆ ಐದು ಮಂದಿ ಸದಸ್ಯರ ಸಮಿತಿ ರಚಿಸಲಾಗಿದೆ. ಮೆಕ್ಯಾನಿಕಲ್ ಎಂಜಿನಿಯರಿಂಗ್, ಆಟೋಮೊಬೈಲ್, ಏರೋ ನಾಟಿಕ್, ಮೆಕಾಟ್ರನಿಕ್ಸ್ ಮೊದಲಾದ ಎಂಜಿನಿಯರಿಂಗ್ ವಿಭಾಗಗಳ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ಸಿದ್ಧಪಡಿಸಲು 12 ಮಂದಿ ಸದಸ್ಯರ ಸಮಿತಿ ರಚಿಸಲಾಗಿದೆ. ಇತರ ವಿಷಯಗಳಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ.
ಒಟ್ಟು 7 ಸಮಿತಿಯ ಸದಸ್ಯರು ಜೂ. 20 ರಂದು ಸಭೆ ಸೇರಿ ಬ್ರಿಡ್ಜ್ ಕೋರ್ಸ್ಗಳ ಬಗ್ಗೆ ಚರ್ಚಿಸಿ ವರದಿ ಸಲ್ಲಿಸಲಿದ್ದಾರೆ. ಅದರಂತೆ ಇಲಾಖೆ ಬ್ರಿಡ್ಜ್ ಕೋರ್ಸ್ ನಿಗದಿಪಡಿಸಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಏನಿದು ಬ್ರಿಡ್ಜ್ ಕೋರ್ಸ್?
ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪಿಯುಸಿ ಮುಗಿದ ವಿದ್ಯಾರ್ಥಿಗಳು ನೇರ ವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ಸೇರಲು ಅವಕಾಶ ನೀಡುವುದರಿಂದ ಮೊದಲ ವರ್ಷದ ಎರಡು ಸೆಮಿಸ್ಟರ್ಗಳು ಸಿಗುವುದಿಲ್ಲ. ಆ ಪಠ್ಯದ ತಾಂತ್ರಿಕ ಅಂಶ ಗಳನ್ನು ಅತ್ಯಂತ ಸುಲಭ ಮತ್ತು ಸರಳವಾಗಿ ವಿದ್ಯಾರ್ಥಿಗಳಿಗೆ ತಿಳಿಸಲು ಬ್ರಿಡ್ಜ್ ಕೋರ್ಸ್ ನೀಡಲಾಗುತ್ತದೆ. ನೇರವಾಗಿ ಎರಡನೇ ವರ್ಷದ ಡಿಪ್ಲೊಮಾ ಕೋರ್ಸ್ಗೆ ಸೇರುವ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಬ್ರಿಡ್ಜ್ ಕೋರ್ಸ್ ಪಡೆಯಬೇಕಾಗುತ್ತದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.