ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ 
ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್ ಪೋರ್ಟಲ್ ಮೂಲಕ ಇಪಿಎಫ್ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್ ಮೂಲಕವೂ ಸಹ  ಬ್ಯಾಲನ್ಸ್ ಚೆಕ್ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ  ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ  :  ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್ಓ ಪೋರ್ಟಲ್ ಮೂಲಕ
2. ಎಸ್ಎಂಎಸ್ ಮುಖಾಂತರವು ತಿಳಿಯಬಹುದು 
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.
ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್ ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್ಓ ಪೋರ್ಟಲ್ ಮೂಲಕ : ಇಪಿಎಫ್ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಲು ಮೊದಲು ನಿಮ್ಮ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್ವರ್ಡ್ ದೊರೆಯುತ್ತದೆ. ಈ ಪಾಸ್ವರ್ಡ್ ಬಳಸಿ ಇಪಿಎಫ್ ಪೋರ್ಟಲ್ನಲ್ಲಿ ಲಾಗಿನ್ ಆಗಿ ಬ್ಯಾಲೆನ್ಸ್ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್ಬುಕ್ ಅನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
ಎಸ್ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್ಓM-Sewa ಹೆಸರಿನ ಸ್ಮಾರ್ಟ್ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…