ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ.
ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಹುಡುಗಿಗಿಂತ ಒಂದು ಗಂಟೆ ಮೊದಲೇ ಬಂದ ಹುಡುಗ, ಪ್ರಿಯತಮೆಯನ್ನು ನೋಡುವ ಕಾತರದಲ್ಲಿದ್ದ.
ಕೈನಲ್ಲಿ ಹೂ ಹಿಡಿದು ನಿಂತಿದ್ದವನ ಮುಂದೆ ಬಂದಿದ್ದು ಫೇಸ್ಬುಕ್ ನಲ್ಲಿದ್ದ ಹುಡುಗಿಯಲ್ಲ. ಹೊಸ ಹುಡುಗಿ ನೋಡ್ತಿದ್ದಂತೆ ದಂಗಾದ ಹುಡುಗ ಪಾರ್ಕ್ ನಿಂದ ಓಡಲು ಶುರುಮಾಡಿದ್ದಾನೆ. ಹುಡುಗಿ ಜನವರಿ 2 ರಂದು ಪೊಲೀಸ್ ಠಾಣೆಗೆ ಹೋಗಿ ಹುಡುಗನ ವಿರುದ್ಧ ದೂರು ನೀಡಿದ್ದಾಳೆ.
facebookruins
ಪೊಲೀಸರು ಹುಡುಗನನ್ನು ಕರೆಸಿ ವಿಚಾರಿಸಿದ್ದಾರೆ. ಫೇಸ್ಬುಕ್ ನಲ್ಲಿ ಸುಂದರ ಫೋಟೋ ಹಾಕಿ ಮೋಸ ಮಾಡಿದ ಹುಡುಗಿ ಶ್ರೀಮಂತೆ ಎಂದು ಸುಳ್ಳು ಹೇಳಿದ್ದಳು. ಆದ್ರೆ ಬೇರೆಯವರ ಮನೆಯಲ್ಲಿ ಕೆಲಸ ಮಾಡ್ತಾಳೆ. ಆಕೆ ಬೇಡ ಎಂದು ಹುಡುಗ ಹೇಳಿದ್ದಾನೆ. ಠಾಣೆಯಲ್ಲಿಯೇ ಇಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ಪೊಲೀಸರು ಇಬ್ಬರನ್ನು ಶಾಂತಗೊಳಿಸಿ ಮನೆಗೆ ಕಳುಹಿಸಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…