ಸುದ್ದಿ

ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

16

ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ.

ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ.

ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ ಅವಧಿಯವರೆಗೆ ವಿಸ್ತರಿಸಿಕೊಳ್ಳಲು ಅವಕಾಶ ನೀಡಿದೆ.

ಅಪರ ಜಿಲ್ಲಾಧಿಕಾರಿ ಬಿ.ಆರ್. ಪೂರ್ಣಿಮಾ ಈ ಕುರಿತು ಮಾಹಿತಿ ನೀಡಿದ್ದು, ಬ್ಯಾಂಕಿನ ಸಾಲದ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದ್ದು, ಪ್ರವಾಹ ಸಂತ್ರಸ್ತ ರೈತರು ಸದುಪಯೋಗ ಮಾಡಿಕೊಳ್ಳಬೇಕೆಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ