ಸುದ್ದಿ

ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

69

ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.

ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ ಶಂಕರ್ ಕೇವಲ 5,000 ರೂ. ಲಂಚ ಪಡೆದು ಇಬ್ಬರ ಸಾವಿಗೆ ಕಾರಣವಾಗಿದ್ದಾನೆ.ಮಾರ್ಚ್ ತಿಂಗಳ 29ರಂದು ಬಾಗಲೂರಿನ ಶೆಲ್ ಕಂಪನಿ ಬಳಿ ‘ರಣಂ’ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಆಗ ಸಿಲಿಂಡರ್ ಬ್ಲಾಸ್ಟ್ ಆಗಿ ಸಮೀರಾ ಬಾನು (28) ಹಾಗೂ ಆಕೆಯ ಮಗಳು ಆಯೇಶಾ ಮೃತಪಟ್ಟಿದ್ದರು. ಪ್ರಕರಣದ ತನಿಖೆ ವೇಳೆ ಪೊಲೀಸರಲ್ಲೇ ಆಂತರಿಕ ವೈಫಲ್ಯದ ಅನುಮಾನ ಮೂಡಿತ್ತು. ಈ ಹಿನ್ನೆಲೆಯಲ್ಲಿ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಆಂತರಿಕ ತನಿಖೆ ನಡೆಸುವಂತೆ ಸೂಚಿಸಿದ್ದರು.
ಶೂಟಿಂಗ್‍ಗೆ ಯಾವುದೇ ಅನುಮತಿ ಇಲ್ಲದಿದ್ದರೂ ವೈಯಕ್ತಿಕವಾಗಿ ಭೀಮಾ ಶಂಕರ್ ಹಣ ಪಡೆದಿದ್ದನು.

ಶೂಟಿಂಗ್ ನಡೆಸುವ ಮುನ್ನ ಚಿತ್ರದ ನಿರ್ದೇಶಕನ ಅನುಮತಿ ಕೋರಿ ಯಲಹಂಕ ಎಸಿಪಿ ಕಚೇರಿಗೆ ತೆರಳಿದ್ದರು. ಆದರೆ ಯಲಹಂಕ ಎಸಿಪಿ ಎಂಎಸ್ ಶ್ರೀನಿವಾಸ್ ಸೂಕ್ತ ದಾಖಲೆ ನೀಡುವವರೆಗೂ ಅನುಮತಿ ಇಲ್ಲ ಎಂದಿದ್ದರು. ಇದೇ ಸಮಯ ದುರುಪಯೋಗ ಪಡಿಸಿಕೊಂಡಿದ್ದ ಭೀಮಾ ಶಂಕರ್ ಚಿತ್ರತಂಡದಿಂದ ಐದು ಸಾವಿರ ಹಣ ಪಡೆದು ತಾನೇ ಸೆಕ್ಯೂರಿಟಿ ನೀಡುವ ರೀತಿ ಕೆಲಸ ಮಾಡಿದ್ದನು. ಯಾವುದೇ ಅನುಮತಿ ಇಲ್ಲದೆ ಚಿತ್ರೀಕರಣ ನಡೆಯುವ ವೇಳೆ ಸಿಲಿಂಡರ್ ಸ್ಫೋಟ ದುರಂತ ನಡೆದಿತ್ತು.

ಸದ್ಯಕ್ಕೆ ವಿದ್ಯಾರಣ್ಯಪುರ ಪೇದೆಯಾಗಿ ಭೀಮಾ ಶಂಕರ್ ಕಾರ್ಯನಿರ್ವಹಿಸುತ್ತಿದ್ದಾನೆ. ಈ ಬಗ್ಗೆ ವರದಿ ಬಂದ ಕೂಡಲೇ ಭೀಮಾ ಶಂಕರ್ ಅಮಾನತು ಮಾಡಲಾಗುತ್ತದೆ. ಈಶಾನ್ಯ ವಿಭಾಗದ ಡಿಸಿಪಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

    ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…

  • ಸುದ್ದಿ

    ಮೊದಲ ವಾರವೇ ಗಳಿಕೆಯಲ್ಲಿ ದಾಖಲೆ ಮುರಿದ ಶ್ರೀಮುರಳಿ ಅಭಿನಯದ ಭರಾಟೆ..!

    ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ.?ತಿಳಿಯಲು ಈ ಲೇಕನ ಓದಿ ಶೇರ್ ಮಾಡಿ..

    ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.