News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..
ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ
ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ
ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್
ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ
ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?
ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು
ಉಬ್ಬಸ ಸಮಸ್ಯೆಗೆ ಮನೆ ಮದ್ದು
ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್
ಮಂಗಳ ಗ್ರಹ
ಸುದ್ದಿ

ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

40

ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.

ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ ಶಂಕರ್ ಕೇವಲ 5,000 ರೂ. ಲಂಚ ಪಡೆದು ಇಬ್ಬರ ಸಾವಿಗೆ ಕಾರಣವಾಗಿದ್ದಾನೆ.ಮಾರ್ಚ್ ತಿಂಗಳ 29ರಂದು ಬಾಗಲೂರಿನ ಶೆಲ್ ಕಂಪನಿ ಬಳಿ ‘ರಣಂ’ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಆಗ ಸಿಲಿಂಡರ್ ಬ್ಲಾಸ್ಟ್ ಆಗಿ ಸಮೀರಾ ಬಾನು (28) ಹಾಗೂ ಆಕೆಯ ಮಗಳು ಆಯೇಶಾ ಮೃತಪಟ್ಟಿದ್ದರು. ಪ್ರಕರಣದ ತನಿಖೆ ವೇಳೆ ಪೊಲೀಸರಲ್ಲೇ ಆಂತರಿಕ ವೈಫಲ್ಯದ ಅನುಮಾನ ಮೂಡಿತ್ತು. ಈ ಹಿನ್ನೆಲೆಯಲ್ಲಿ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಆಂತರಿಕ ತನಿಖೆ ನಡೆಸುವಂತೆ ಸೂಚಿಸಿದ್ದರು.
ಶೂಟಿಂಗ್‍ಗೆ ಯಾವುದೇ ಅನುಮತಿ ಇಲ್ಲದಿದ್ದರೂ ವೈಯಕ್ತಿಕವಾಗಿ ಭೀಮಾ ಶಂಕರ್ ಹಣ ಪಡೆದಿದ್ದನು.

ಶೂಟಿಂಗ್ ನಡೆಸುವ ಮುನ್ನ ಚಿತ್ರದ ನಿರ್ದೇಶಕನ ಅನುಮತಿ ಕೋರಿ ಯಲಹಂಕ ಎಸಿಪಿ ಕಚೇರಿಗೆ ತೆರಳಿದ್ದರು. ಆದರೆ ಯಲಹಂಕ ಎಸಿಪಿ ಎಂಎಸ್ ಶ್ರೀನಿವಾಸ್ ಸೂಕ್ತ ದಾಖಲೆ ನೀಡುವವರೆಗೂ ಅನುಮತಿ ಇಲ್ಲ ಎಂದಿದ್ದರು. ಇದೇ ಸಮಯ ದುರುಪಯೋಗ ಪಡಿಸಿಕೊಂಡಿದ್ದ ಭೀಮಾ ಶಂಕರ್ ಚಿತ್ರತಂಡದಿಂದ ಐದು ಸಾವಿರ ಹಣ ಪಡೆದು ತಾನೇ ಸೆಕ್ಯೂರಿಟಿ ನೀಡುವ ರೀತಿ ಕೆಲಸ ಮಾಡಿದ್ದನು. ಯಾವುದೇ ಅನುಮತಿ ಇಲ್ಲದೆ ಚಿತ್ರೀಕರಣ ನಡೆಯುವ ವೇಳೆ ಸಿಲಿಂಡರ್ ಸ್ಫೋಟ ದುರಂತ ನಡೆದಿತ್ತು.

ಸದ್ಯಕ್ಕೆ ವಿದ್ಯಾರಣ್ಯಪುರ ಪೇದೆಯಾಗಿ ಭೀಮಾ ಶಂಕರ್ ಕಾರ್ಯನಿರ್ವಹಿಸುತ್ತಿದ್ದಾನೆ. ಈ ಬಗ್ಗೆ ವರದಿ ಬಂದ ಕೂಡಲೇ ಭೀಮಾ ಶಂಕರ್ ಅಮಾನತು ಮಾಡಲಾಗುತ್ತದೆ. ಈಶಾನ್ಯ ವಿಭಾಗದ ಡಿಸಿಪಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

About the author / 

admin

Categories

Date wise

  • ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

ಏನ್ ಸಮಾಚಾರ