ಸುದ್ದಿ

ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

41

ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ ವಿತರಿಸಲಾಗಿದೆ.

ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಜನರಿಗೆ ದೇವರು ಶಕ್ತಿ ನೀಡಲಿ. ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳು ಮತ್ತೆ ಮೊದಲಿನಂತಾಗಲಿ ಎಂದು ಈ ಬಾರಿ ವರಮಹಾಲಕ್ಷ್ಮಿಯಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಪ್ರತಿ ವರ್ಷದಂತೆ ಗ್ರಾಮದ ಹೊರವಲಯದಲ್ಲಿರುವ ಆದಿಪರಾಶಕ್ತಿಯ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆಯನ್ನ ಮಾಡಲಾಗಿದೆ. ಇಲ್ಲಿ ಕಳೆದ 22 ವರ್ಷಗಳಿಂದ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿ ವರಮಹಾಲಕ್ಷ್ಮಿ ಹಬ್ಬಕ್ಕೆಂದು 108 ಬಗೆಯ ಸಿಹಿ ತಿಂಡಿಗಳನ್ನು ಮಾಡಿ ವರಮಹಾಲಕ್ಷ್ಮಿ ಪೂಜೆಯನ್ನು ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಮ್ಮಪ್ಪಸ್ವಾಮಿ ತಿಳಿಸಿದ್ದಾರೆ.

ತಿಮ್ಮಪ್ಪಸಾಮಿ ಅವರಿಗೆ ತಮ್ಮ ಭೂಮಿಯಲ್ಲಿ ಸಿಕ್ಕ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಕಳೆದ 22 ವರ್ಷಗಳಿಂದ ಈ ಜಾಗದಲ್ಲಿ ಆದಿಪರಾಶಕ್ತಿ ದೇವರ ಪ್ರತಿಷ್ಠಾಪನೆ ಮಾಡಿ, ದೇವಾಲಯ ನಿರ್ಮಾಣ ಮಾಡಲಾಗಿದೆ. ಅಂದಿನಿಂದ ಈ ದೇವಾಲಯದಲ್ಲಿ ಹಲವು ವಿಶೇಷ ಪೂಜೆಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಹಾಗಾಗಿ ಇಂದಿಗೂ ಇಲ್ಲಿಗೆ ದೂರದ ಊರುಗಳಿಂದ ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸುತ್ತಮುತ್ತಲ ಹಳ್ಳಿಗಳ ಜನರು ಸೇರಿದಂತೆ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಿಂದ ಜನ ಬರುತ್ತಾರೆ.

ಹಾಗಾಗಿನೇ ಇಲ್ಲಿ ಪ್ರತಿ ವರ್ಷದಂತೆ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುವ ಮೂಲಕ ಮಳೆ ಹಾನಿಯಿಂದ ನೊಂದವರಿಗೆ ಕಷ್ಟಗಳನ್ನ ಎದುರಿಸುವ ಶಕ್ತಿಕೊಡು ಎಂದು ತಾಯಿಯಲ್ಲಿ ಪ್ರಾರ್ಥನೆ ಮಾಡಲಾಗಿದೆ. ಇಲ್ಲಿನ ತಿಮ್ಮಪ್ಪ ಸ್ವಾಮೀಜಿ ಹಲವಾರು ವರ್ಷಗಳಿಂದ ಬರಗಾಲದಿಂದ ತತ್ತರಿಸಿರುವ ಕೋಲಾರ ಜಿಲ್ಲೆಗೆ ಒಳ್ಳೆಯದಾಗಲಿ ಎಂದು ಇಲ್ಲಿನ ಗುಹೆಯಲ್ಲಿ ತಪ್ಪಸ್ಸು ಮಾಡುತ್ತಿದ್ದಾರೆ ಎಂದು ಮುಳಬಾಗಲು ತಹಶೀಲ್ದಾರ್ ಪ್ರವೀಣ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ