ಸಿನಿಮಾ

ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

290

ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕ್ಷಮೆ ಕೇಳಿದ್ದಾರೆ.

ನಾನು ನನ್ನ ಅನುಭವ ಹಾಗೂ ಜೀವನದಲ್ಲಿ ನಡೆದ ಸತ್ಯವನ್ನೇ ಹೇಳಿಕೊಂಡಿದ್ದೇನೆ.ಗಂಡ ಹೆಂಡತಿ ಚಿತ್ರದ ವೇಳೆ ನಡೆದ ಘಟನೆಗಳ, ನನ್ನ ಅನುಭವಗಳನ್ನು ನಾನು ಮೀಟೂ ಅಭಿಯಾನದ ಮೂಲಕ ಹಂಚಿಕೊಂಡಿದ್ದೆ. ಇದರಿಂದ ಆ ಚಿತ್ರ ನಿರ್ದೇಶಕರಿಗೆ, ನಿರ್ದೇಶಕರ ಸಂಘದ ಸದಸ್ಯರಿಗೆ ನೋವಾಗಿದೆ. ನನಗೆ ಯಾರನ್ನೂ ನೋವು ಮಾಡಬೇನ್ನುವುದಿಲ್ಲ. ಯಾರ ಜೀವನ ಹಾಳಾಗಬೇಕೆಂದು ನಾನು ಬಯಸಲ್ಲ.

ನನ್ನ ಉದ್ದೇಶ ಯಾರ ಹೆಸರು ಹಾಗೂ ಜೀವನವನ್ನು ಹಾಳು ಮಾಡಬೇಕೆಂದು ಇರಲಿಲ್ಲ.ಹಿರಿಯ ನಟ ಅಂಬರೀಶ್, ದೊಡ್ಡಣ್ಣ ಹಾಗೂ ರಾಕ್‍ಲೈನ್ ವೆಂಕಟೇಶ್ ಅವರ ಮಾತಿಗೆ ಬೆಲೆಕೊಟ್ಟು ನಾನು ನಿರ್ದೇಶಕರ ಹಾಗೂ ಚಿತ್ರತಂಡದ ಸರ್ವರಲ್ಲಿ ಕ್ಷಮೆ ಬೇಡುತ್ತೇನೆ ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಕವಿ

    ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…

  • ಆರೋಗ್ಯ

    ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

    ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.

  • ಜೀವನಶೈಲಿ

    ನಿಮ್ಗೆ ತುಂಬಾ ಬೇಸರವಾಗ್ತಿದೆಯೇ?ಸುಮ್ಮನಿರಬೇಡಿ…ಈ 8 ಕೆಲಸಗಳನ್ನು ಮಾಡಿ ನೋಡಿ..!

    ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…