ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ.

ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ ಗಾಂಧೀಜಿ ಅವರನ್ನು ಹೋಲುವ ಕಾರ್ಟೂನ್ ಚಿತ್ರ ಕೂಡ ಇತ್ತು.

ಗಾಂಧೀಜಿ ಚಿತ್ರವಿರುವ ಬಿಯರ್ ಬಾಟಲಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರಪಿತ ಗಾಂಧೀಜಿಗೆ ಇಸ್ರೇಲ್ ಅವಮಾನ ಮಾಡಿದೆ ಎಂದು ರೊಚ್ಚಿಗೆದ್ದ ಭಾರತೀಯರು ಮಾಲ್ಕಾ ಬಿಯರ್ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಗ್ಗೆ ರಾಜ್ಯ ಸಭೆಯಲ್ಲೂ ಕೂಡ ಮಂಗಳವಾರ ಚರ್ಚೆ ನಡೆದಿತ್ತು. ಈ ವೇಳೆ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಹಾಗೂ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಕೂಡ ವಿರೋಧ ವ್ಯಕ್ತಪಡಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಭಾರತದಲ್ಲಿ ಅಸಮಾಧಾನ ಭುಗಿಲೆದ್ದ ಹಿನ್ನೆಲೆ ಎಚ್ಚೆತ್ತುಕೊಂಡ ಕಂಪನಿ ಬ್ರಾಂಡ್ ಮ್ಯಾನೇಜರ್ ಭಾರತೀಯರಲ್ಲಿ ಹಾಗೂ ಭಾರತ ಸರ್ಕಾರಕ್ಕೆ ಕ್ಷಮೆಯಾಚಿಸಿದ್ದಾರೆ. ಗಾಂಧೀಜಿ ಅವರ ಚಿತ್ರವನ್ನು ಬಿಯರ್ ಬಾಟಲಿ ಮೇಲೆ ಹಾಕಿದ್ದು ತಪ್ಪಾಯಿತು. ಇದರಿಂದ ಭಾರತೀಯರ ಭಾವನೆಗಳಿಗೆ ದಕ್ಕೆ ಉಂಟಾಗಿದೆ. ಮಹಾತ್ಮ ಗಾಂಧೀಜಿ ಅವರಿಗೆ ಜಾಗತಿಕ ಮಟ್ಟದಲ್ಲಿ ಗೌರವಿಸಲಾಗುತ್ತದೆ. ನಾವು ನಮ್ಮ ಕಂಪನಿ ಬಿಯರ್ ಬಾಟಲಿಗಳ ಮೇಲೆ ಇರುವ ಗಾಂಧೀಜಿ ಅವರ ಚಿತ್ರವನ್ನು ತೆಗೆಯುತ್ತೇವೆ ಕ್ಷಮಿಸಿ ಎಂದಿದ್ದಾರೆ.
ಅಚಾತುರ್ಯದಿಂದ ಬಾಟಲಿಗಳ ಮೇಲೆ ಅವರ ಚಿತ್ರ ಮುದ್ರಿತಗೊಂಡಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ ಹಿನ್ನೆಲೆ ಗಾಂಧೀಜಿ ಅವರಿಗೆ ಗೌರವ ಸಲ್ಲಿಸಲು ಬಿಯರ್ ಬಾಟಲಿ ಮೇಲೆ ಅವರ ಚಿತ್ರ ಬಳಸಲಾಯಿತು. ಗಾಂಧೀಜಿ ಮಾತ್ರವಲ್ಲ ಬಾಟಲಿಯ ಮೇಲೆ ಇಸ್ರೇಲ್‍ನ ಮೂವರು ಮಾಜಿ ಪ್ರಧಾನಿಗಳ ಜತೆ ಚಿತ್ರವನ್ನೂ ಗೌರವ ಸಲ್ಲಿಸಲು ಬಳಸಲಾಗಿತ್ತು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.