ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ.
ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ ಗಾಂಧೀಜಿ ಅವರನ್ನು ಹೋಲುವ ಕಾರ್ಟೂನ್ ಚಿತ್ರ ಕೂಡ ಇತ್ತು.
ಗಾಂಧೀಜಿ ಚಿತ್ರವಿರುವ ಬಿಯರ್ ಬಾಟಲಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರಪಿತ ಗಾಂಧೀಜಿಗೆ ಇಸ್ರೇಲ್ ಅವಮಾನ ಮಾಡಿದೆ ಎಂದು ರೊಚ್ಚಿಗೆದ್ದ ಭಾರತೀಯರು ಮಾಲ್ಕಾ ಬಿಯರ್ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಗ್ಗೆ ರಾಜ್ಯ ಸಭೆಯಲ್ಲೂ ಕೂಡ ಮಂಗಳವಾರ ಚರ್ಚೆ ನಡೆದಿತ್ತು. ಈ ವೇಳೆ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಹಾಗೂ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಕೂಡ ವಿರೋಧ ವ್ಯಕ್ತಪಡಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.
ಭಾರತದಲ್ಲಿ ಅಸಮಾಧಾನ ಭುಗಿಲೆದ್ದ ಹಿನ್ನೆಲೆ ಎಚ್ಚೆತ್ತುಕೊಂಡ ಕಂಪನಿ ಬ್ರಾಂಡ್ ಮ್ಯಾನೇಜರ್ ಭಾರತೀಯರಲ್ಲಿ ಹಾಗೂ ಭಾರತ ಸರ್ಕಾರಕ್ಕೆ ಕ್ಷಮೆಯಾಚಿಸಿದ್ದಾರೆ. ಗಾಂಧೀಜಿ ಅವರ ಚಿತ್ರವನ್ನು ಬಿಯರ್ ಬಾಟಲಿ ಮೇಲೆ ಹಾಕಿದ್ದು ತಪ್ಪಾಯಿತು. ಇದರಿಂದ ಭಾರತೀಯರ ಭಾವನೆಗಳಿಗೆ ದಕ್ಕೆ ಉಂಟಾಗಿದೆ. ಮಹಾತ್ಮ ಗಾಂಧೀಜಿ ಅವರಿಗೆ ಜಾಗತಿಕ ಮಟ್ಟದಲ್ಲಿ ಗೌರವಿಸಲಾಗುತ್ತದೆ. ನಾವು ನಮ್ಮ ಕಂಪನಿ ಬಿಯರ್ ಬಾಟಲಿಗಳ ಮೇಲೆ ಇರುವ ಗಾಂಧೀಜಿ ಅವರ ಚಿತ್ರವನ್ನು ತೆಗೆಯುತ್ತೇವೆ ಕ್ಷಮಿಸಿ ಎಂದಿದ್ದಾರೆ.
ಅಚಾತುರ್ಯದಿಂದ ಬಾಟಲಿಗಳ ಮೇಲೆ ಅವರ ಚಿತ್ರ ಮುದ್ರಿತಗೊಂಡಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ ಹಿನ್ನೆಲೆ ಗಾಂಧೀಜಿ ಅವರಿಗೆ ಗೌರವ ಸಲ್ಲಿಸಲು ಬಿಯರ್ ಬಾಟಲಿ ಮೇಲೆ ಅವರ ಚಿತ್ರ ಬಳಸಲಾಯಿತು. ಗಾಂಧೀಜಿ ಮಾತ್ರವಲ್ಲ ಬಾಟಲಿಯ ಮೇಲೆ ಇಸ್ರೇಲ್ನ ಮೂವರು ಮಾಜಿ ಪ್ರಧಾನಿಗಳ ಜತೆ ಚಿತ್ರವನ್ನೂ ಗೌರವ ಸಲ್ಲಿಸಲು ಬಳಸಲಾಗಿತ್ತು ಎಂದು ತಿಳಿಸಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…