ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.
ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.
ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್ ನೋಬ್ ಆಫ್ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.
ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.
ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.