ಸುದ್ದಿ

ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

By admin

January 28, 2019

ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು.

ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು. ಅಲ್ಲದೇ ಇವರಿಬ್ಬರ ಕುಟುಂಬದವರು ಕೂಡ ಒಳ್ಳೆಯ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ. ಇಬ್ಬರ ಕುಟುಂಬದವರು ತಮ್ಮ ಮಕ್ಕಳ ಮದುವೆಗಾಗಿ ಜೀವನ ಸಂಗಾತಿಯನ್ನು ಹುಡುಕಾಡುತ್ತಿದ್ದರು.

ದಿವ್ಯಾಶ್ರೀ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯವರಾಗಿದ್ದು, ಮಾರ್ಚ್ 14ರಂದು ಶೃಂಗೇರಿಯಲ್ಲಿ ಇವರ ಮದುವೆ ನಡೆಯಲಿದೆ. ದಿವ್ಯಾಶ್ರೀ ಅವರು ಪುಣ್ಯಾತ್ ಗಿತ್ತೀಯರು ಚಿತ್ರದಲ್ಲಿ ನಟಿಸಿದರೆ, ಗೋವಿಂದೇ ಗೌಡ ಅವರು ಕೆಜಿಎಫ್ ಸಿನಿಮಾದಲ್ಲಿ ನಟಿಸಿದ್ದಾರೆ.