ಸುದ್ದಿ

12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್..ಗಿನ್ನಿಸ್ ದಾಖಲೆಯಲ್ಲಿ ಮಿಂಚುತ್ತಿರುವ ಹುಬ್ಬಳ್ಳಿ ಬಾಲೆ..!

By admin

November 15, 2019

ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ.

ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು.

ವಿಆರ್‌ಎಲ್‌ ಕಂಪನಿಯ ಸಿಎಫ್‍ಒ ಆಗಿರುವ ಸುನೀಲ್ ಎಸ್. ನಲವಡಿ ಹಾಗೂ ದೀಪಾ ಎಸ್. ನಲವಡಿ ಅವರ ಪುತ್ರಿಯಾದ ಓಜಲ್, ಏಷ್ಯಾ ಬುಕ್ ಆಫ್ ರೆಕಾರ್ಡ್, ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದಂತೆ ಇದುವರೆಗೆ ಒಟ್ಟು 13 ದಾಖಲೆಗಳನ್ನು ನಿರ್ಮಿಸಿದ್ದಾಳೆ.

ಇದೀಗ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸ್ಕೇಟಿಂಗ್ ಮಾಡುವ ಮೂಲಕ ಸಾಧನೆ ಮಾಡಿದ್ದಾರೆ. ಓಜಲ್‍ಳಿಗೆ ಅಕ್ಷಯ ಸೂರ್ಯವಂಶಿ ಎಂಬವರು ತರಬೇತಿ ನೀಡಿದ್ದರು.