ಸುದ್ದಿ

ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

251

ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು.

ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದು ಕೊ೦ಡರು. ಕಾರ್ನಾಡ್ ಅವರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ನಡೆಯಿತು.

ಆ ಬಳಿಕ ರ್ಹೊಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದಾರೆ.ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ’ ಯಯಾತಿ’ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಕಾರ್ನಾಡ್ ಅವರಿಗೆ ಜ್ಞಾನ ಪೀಠ ಪ್ರಶಸ್ತಿ, ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿಗಳು ಲಭಿಸಿದ್ದವು,

ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‍ನ ನಿರ್ದೇಶಕ ರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬಯಿಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ನಂತರ ಕಾರ್ನಾಡ್ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

    ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ…

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…

  • ಜ್ಯೋತಿಷ್ಯ

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…

  • ಸರ್ಕಾರದ ಯೋಜನೆಗಳು

    ಬಿ.ಪಿ.ಎಲ್. ಕುಟುಂಬಗಳಿಗೆ ಸರ್ಕಾರದಿಂದ “ಇಂದಿರಾ ಬಟ್ಟೆ ಭಾಗ್ಯ”..! ತಿಳಿಯಲು ಈ ಓದಿ..

    ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.