ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ.
ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು.
ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ ಆಸೆಯನ್ನು ವ್ಯಕ್ತಪಡಿಸಿದ್ದರು. ಮಧ್ಯಾಹ್ನ ನಾವು ಅಂತ್ಯ ಸಂಸ್ಕಾರದ ಸಮಯದ ನಿಗದಿ ಮಾಡುತ್ತೇವೆ. ಅಪಾರ್ಟ್ ಮೆಂಟ್ ಬಳಿ, ಸಾರ್ವಜನಿಕರು ರಾಜಕಾರಣಿಗಳು ಬರುವುದು ಬೇಡ ಎಂದು ಪತ್ನಿ ಸರಸ್ವತಿ ಕಾರ್ನಾಡ್ ಮನವಿ ಮಾಡಿಕೊಂಡಿದ್ದಾರೆ.
ಸಾಹಿತಿಗಳನ್ನು ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಸುವ ಬಗ್ಗೆ ಈ ಹಿಂದೆ ಭಾರೀ ಟೀಕೆ ವ್ಯಕ್ತವಾಗಿತ್ತು. ಜಿ ಎಸ್ ಶಿವರುದ್ರಪ್ಪ, ಅನಂತಮೂರ್ತಿ ಅಂತ್ಯಕ್ರಿಯೆ ವೇಳೆ ಕಲಾಗ್ರಾಮದಲ್ಲಿ ಸ್ಥಳ ನೀಡುವ ಬಗ್ಗೆ ಭಿನ್ನ ಅಭಿಪ್ರಾಯ ಗಳು ಹೊರಬಿದ್ದಿತ್ತು. ಈ ಸಂದರ್ಭದಲ್ಲಿ ಸಾವಿನಲ್ಲೂ ರಾಜಕೀಯ ಬೇಡ ಎಂಬ ಅಭಿಪ್ರಾಯವನ್ನ ತಮ್ಮ ಪತ್ನಿ ಬಳಿ ತಿಳಿಸಿ ಸರ್ಕಾರಿ ಗೌರವ, ಸರ್ಕಾರಿ ಜಾಗ ಬೇಡ ಎಂದು ತಿಳಿಸಿದ್ದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.