15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತಿದ್ದೇವೆ.
ನಾವು ಈ ಬಗ್ಗೆ ಎಷ್ಟೇ ಎಚ್ಚರಿಕೆ ವಹಿಸಿದ್ದರು ಕೂಡ ಶೌಚಾಲಯಗಳಿಗೆ ನೀರು ಕೊಡಬೇಕಾಗುತ್ತದೆ. ನಮ್ಮ ವಸತಿಯಲ್ಲಿ ಇರುವವರಿಗೆ ಶೌಚಾಲಯದಲ್ಲಿ ನೀರು ಕೊಡಲೇಬೇಕು. ಶಾಲೆಗಳಿಗೆ ರಜೆ ಇರುವುದರಿಂದ ಎಲ್ಲರೂ ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಇಲ್ಲಿ ಬಂದರೂ ಸಾಕಷ್ಟು ನೀರು ಬೇಕಾಗುತ್ತದೆ. ಹಾಗಾಗಿ ಧರ್ಮಸ್ಥಳಕ್ಕೆ ಈಗಲೆ ಯಾರೂ ಬರಬೇಡಿ ಎಂದು ವಿನಂತಿ ಮಾಡುತ್ತಿದ್ದೇನೆ ಎಂದರು.
ಅದು ನೇತ್ರಾವತಿ ಕಿಂಡಿ ಅಣೆಕಟ್ಟಿನಲ್ಲಿ ತಾತ್ಕಾಲಿಕ ನೀರು ಹಾಗೂ ತೀರ್ಥದ ಗುಂಡಿಯಲ್ಲಿ ಸ್ವಲ್ಪ ನೀರಿದೆ. ಮುಂದೆ ಮಳೆ ಬರದಿದ್ದರೆ ಮಂಜುನಾಥನಿಗೂ ಬರದ ಬಿಸಿ ತಟ್ಟಲಿದೆ. ಅಲ್ಲಿನ ತೀರ್ಥ ಗುಂಡಿಯಲ್ಲೂ ನಾಲ್ಕು ಅಡಿ ನೀರು ಕಡಿಮೆ ಆಗಿದೆ. ಹಿಂದೆಯೂ ಈ ರೀತಿ ಆಗಿದೆ. ಆದರೆ ಇಷ್ಟು ತೀವ್ರವಾಗಿ ಆಗಿರಲಿಲ್ಲ. ಉಪನದಿಗಳಲ್ಲಿ ನೀರು ಬತ್ತಿರುವ ಪರಿಣಾಮ ನೀರಿಗೆ ಸಮಸ್ಯೆ ಆಗಿದೆ. ಕಾಡು ಉಳಿಸದೇ ಇರುವ ಕಾರಣ ಈ ಸಮಸ್ಯೆ ಎದುರಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಸರ್ಕಾರ ಮತ್ತು ಜಲತಜ್ಞರು ಈ ಬಗ್ಗೆ ಯೋಚನೆ ಮಾಡಬೇಕು. ಮುಂದಿನ 15-20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಪಶ್ಚಿಮ ಘಟ್ಟದಲ್ಲಿ ಅರಣ್ಯನಾಶದಿಂದ ನೀರಿನ ಸಮಸ್ಯೆ ಆಗಿದೆ ಎಂದು ವೀರೇಂದ್ರ ಹೆಗ್ಗಡೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…