ಸುದ್ದಿ

ಒಂದೇ ದಿನಕ್ಕೆ 1.26 ಲಕ್ಷ ಸರ್ಕಾರಿ ಉದ್ಯೋಗ….! ಯಾರ್ಯಾರಿಗೆ,ಇಲ್ಲಿದೆ ನೋಡಿ ಮಾಹಿತಿ,.!!

254

ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ ನೇಮಕಪತ್ರ ನೀಡಿ ಶುಭಹಾರೈಸಿ ನುಡಿದಂತೆ ನಡೆಯುವ ವಿಶ್ವಾಸ ಮೂಡಿಸಿದರು.

ಇಷ್ಟೇ ಅಲ್ಲ ಇದೇ ವೇಳೆ ಮಾತನಾಡಿದ ಜಗನ್‌ಮೋಹನ್ ರೆಡ್ಡಿ, ಇನ್ಮುಂದೆ ಪ್ರತಿವರ್ಷವೂ ಸರ್ಕಾರಿ ಉದ್ಯೋಗದಲ್ಲಿ ಯುವಕರ ನೇಮಕಕ್ಕೆ ಆದ್ಯತೆ ನೀಡುವುದಾಗಿ ಹೇಳಿದ್ದಾರೆ.

ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದ ಆಶಾ ಕಾರ್ಯಕರ್ತೆ ಯರ ವೇತನ ಹೆಚ್ಚಳ‌ ಮಾಡಿದ್ದ. ಜಗನ್, 3 ಸಾವಿರ ಗೌರವಧನ ಪಡೆಯುತ್ತಿದ್ದ ಕಾರ್ಯಕರ್ತೆಯರಿಗೆ 10 ಸಾವಿರ ಗೌರವಧನ ನಿಗದಿ ಪಡಿಸಿದ್ದರು. ಇದಲ್ಲದೇ ಹಲವು ಜನಪರ ಯೋಜನೆ ಪ್ರಕಟಿಸಿದ್ದ ಸಿಎಂ ವೃದ್ಧಾಪ್ಯ ವೇತನದ ಮೊತ್ತವನ್ನು ಹೆಚ್ಚಿಸಿ ಜನಮೆಚ್ಚುಗೆ ಗಳಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…

  • ಸುದ್ದಿ

    ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!

    ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್‌ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್‌ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….