ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ.
ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ ಬೆಳೆಸಲಿದ್ದಾರೆ. ಜೂನ್ 21 ರಿಂದ ಹಳ್ಳಿ ಜನರ ಕಷ್ಟ ಕೇಳುವ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ. ಇಷ್ಟು ದಿನ ಬೇರೆ ಬೇರೆ ಗೊಂದಲಗಳಲ್ಲಿ ಸಿಲುಕಿದ್ದ ಸಿಎಂ, ಈಗ ಜನರ ಬಳಿಗೆ ಸಿಂಪಲ್ಲಾಗೆ ಹೋಗಲು ಮುಂದಾಗಿದ್ದು, ತಾವು ಬದಲಾಗಿದ್ದೇವೆ ಎಂದು ತೋರಿಸುತ್ತಿದ್ದಾರಾ ಅನ್ನೋ ಚರ್ಚೆ ಆರಂಭವಾಗಿದೆ.
ಮಂಗಳವಾರ ಇಡೀ ದಿನ ಲೋಕೋಪಯೋಗಿ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆ ಸಭೆ ನಡೆಸಿದ್ದ ಸಿಎಂ ಇಂದು ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಸಿಇಓಗಳ ಸಭೆ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಇಡೀ ದಿನ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ರೈತರ ಸಾಲಮನ್ನಾ, ಬರ ನಿರ್ವಹಣೆ ಕುರಿತು ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಪ್ರತಿ ಜಿಲ್ಲಾವಾರು ಸಭೆ ನಡೆಸಲಿರುವ ಸಿಎಂ, ಜಿಲ್ಲೆಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇಂಟರ್ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…