ಆರೋಗ್ಯ

ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

43

ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು. 

ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.

ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.

1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.

ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ