ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ ಎಂಬ ಚರ್ಚೆ ನಡೆಯಿತು. ಆದರೆ ಆ ಬಗ್ಗೆ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಅದರ ಬದಲಾಗಿ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ 15 ಸಾಂದರ್ಭಿಕ ರಜೆಯನ್ನು ಕಡಿತಗೊಳಿಸಿ 10ಕ್ಕೆ ಇಳಿಸಲಾಗಿದೆ ಎಂದರು.
ಎರಡನೇ ಶನಿವಾರ ರಜೆ ಎಲ್ಲಾ ಇಲಾಖೆಗಳಿಗೂ ಅನ್ವಯಿಸುವುದಾಗಿ ಸ್ಪಷ್ಟಪಡಿಸಿದ ಅವರು, ಮತ್ತೊಮ್ಮೆ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಸಂಬಂಧ ಸಭೆ ನಡೆಸಲಿದ್ದಾರೆ. ತಕ್ಷಣದಿಂದ ರಜೆ ಘೋಷಣೆಯಾಗುತ್ತಿಲ್ಲ. ಮುಂದಿನ ವರ್ಷದಿಂದ ಇದು ಜಾರಿಗೆ ಬರುವುದಾಗಿ ಅವರು ತಿಳಿಸಿದರು.ಕನಕ, ಬಸವ ಹಾಗೂ ವಾಲ್ಮೀಕಿ ಜಯಂತಿ ಸೇರಿದಂತೆ ಕೆಲ ಜಯಂತಿಗಳ ರಜೆ ಕಡಿತಗೊಳಿಸುವ ಬಗ್ಗೆ ಕಾಂಗ್ರೆಸ್-ಜೆಡಿಎಸ್ ಸಚಿವರು ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ರಜೆಗಳನ್ನು ರದ್ದು ಮಾಡದೇ, ಯಥಾವತ್ ಆಗಿ ಮುಂದುವರೆಸಲಾಗುವುದು. ಆದರೆ, ನಾಲ್ಕನೇ ಶನಿವಾರದಂದು ಸರ್ಕಾರಿ ರಜೆ ನೀಡಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
6ನೇ ವೇತನ ಆಯೋಗದ ಶಿಫಾರಸಿನಂತೆ ಜಯಂತಿಗಳನ್ನು ರದ್ದುಗೊಳಿಸುವ ಬಗ್ಗೆ ಪರಿಶೀಲನೆಗೆ ರಚಿಸಲಾಗಿದ್ದ ಕೃಷ್ಣಭೈರೇಗೌಡ ನೇತೃತ್ವದ ಸಂಪುಟ ಉಪಸಮಿತಿ ಜಯಂತಿಗಳ ರಜೆ ಕಡಿತಗೊಳಿಸಿ 4ನೇ ಶನಿವಾರ ರಜೆ ನೀಡುವಂತೆ ಶಿಫಾರಸು ಮಾಡಿತ್ತು. ಆದರೆ ಈ ವರದಿ ಅನ್ವಯ ಜಯಂತಿಗಳಿಗೆ ರಜೆ ಕಡಿತಗೊಳಿಸಿದರೆ, ಲಿಂಗಾಯತ, ಕುರುಬ, ವಾಲ್ಮೀಕಿ ಸೇರಿದಂತೆ ಅನೇಕ ಸಮುದಾಯಗಳು ಅಸಮಾಧಾನಕ್ಕೆ ಒಳಗಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸಂಪುಟ ಸಭೆಯಲ್ಲಿ ಪರ ವಿರೋಧ ಚರ್ಚೆಯಾಗಿದ್ದು, ಅಂತಿಮವಾಗಿ ಈ ರಜೆ ಕಡಿತ ನಿರ್ಧಾರದಿಂದ ಸದ್ಯದ ಮಟ್ಟಿಗೆ ಹಿಂದೆ ಸರಿಯಲಾಗಿದೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…