ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.
35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ ಹೊಟ್ಟೆಯಲ್ಲಿ ಕಂಡ ವಸ್ತುಗಳು ವೈದ್ಯರನ್ನು ಕಂಡು ವೈದ್ಯರು ಮತ್ತಷ್ಟು ಹೌಹಾರಿ ಹೋಗಿದ್ದಾರೆ.
ಆತನ ಹೊಟ್ಟೆಯಲ್ಲಿದ್ದುದು ಏನು ಗೊತ್ತೇ? ಬರೋಬ್ಬರಿ 8 ಚಮಚ, 2 ಸ್ಕ್ರೂ ಡ್ರೈವರ್, 2 ಹಲ್ಲುಜ್ಜುವ ಬ್ರಷ್ ಮತ್ತೊಂದು ಚಾಕು.
ಮಾನಸಿಕ ಅಸ್ವಸ್ಥ : ಈ ಕುರಿತು ಪ್ರತಿಕ್ರಿಯಿಸಿರುವ ವೈದ್ಯ ಡಾ. ನಿಖಿಲ್ ಹೊಟ್ಟೆ ನೋವೆಂದು ನಮ್ಮಲ್ಲಿಗೆ ಬಂದ ವ್ಯಕ್ತಿಯ ಹೊಟ್ಟೆಯಲ್ಲಿ ಲೋಹದ ವಸ್ತುಗಳೇ ತುಂಬಿರುವುದು ಪತ್ತೆಯಾಯಿತು. ತಕ್ಷಣ ನಮ್ಮ ಸರ್ಜನ್ ತಂಡ ಶಸ್ತ್ರಚಿಕಿತ್ಸೆ ನಡೆಸಿತು. ಮತ್ತೀಗ ಆತನ ಆರೋಗ್ಯ ಸ್ಥಿರವಾಗಿದೆ. ಆತ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾನೆ. ಸಾಮಾನ್ಯ ವ್ಯಕ್ತಿ ಚಮಚ ಮತ್ತು ಚಾಕುವನ್ನು ತಿನ್ನಲು ಸಾಧ್ಯವಿಲ್ಲ. ಇದೊಂದು ವಿಲಕ್ಷಣ ಪ್ರಸಂಗ ಎಂದಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.