ರೆಸಿಪಿ

ಮನೆಯಲ್ಲೇ ಕೆಲವೇ ಕ್ಷಣಗಳಲ್ಲಿ ಬಿಸಿ ಬಿಸಿ ಎಗ್ ಪೆಪ್ಪರ್ ಫ್ರೈ ಮಾಡಿ ತಿನ್ನಿ…ಮಾಡುವುದು ಹೇಗೆ?

806

ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ..

ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4    3. ಎಣ್ಣೆ – 2-3 ಚಮಚ
3. ಮೆಣಸು – 1 ಚಮಚ   4. ಉಪ್ಪು – ರುಚಿಗೆ ತಕ್ಕಷ್ಟು
5. ಕೊತ್ತಂಬರಿ ಸೊಪ್ಪು -ಸ್ವಲ್ಪ  6. ಅರಿಶಿಣ – ಚಿಟಿಕೆ

ಮಾಡುವ ವಿಧಾನ

* ಮೊದಲಿಗೆ ನಾಲ್ಕು ಮೊಟ್ಟೆಗಳನ್ನು ಒಂದು ಕುಕ್ಕರ್ ಗೆ ಹಾಕಿ, ಸ್ವಲ್ಪ ಉಪ್ಪು, ನೀರು ಹಾಕಿ ಒಂದು ವಿಶಲ್ ಕೂಗಿಸಿ ಬೇಯಿಸಿಕೊಳ್ಳಿ.
* ಈಗ ಮೊಟ್ಟೆ ಬಿಡಿಸಿ ಒಂದು ಮೊಟ್ಟೆಯನ್ನು ಎರಡು ಭಾಗ ಮಾಡಿ ಕಟ್ ಮಾಡಿಕೊಳ್ಳಿ.
* ಬಳಿಕ ಒಂದು ಪ್ಯಾನ್ ಗೆ ಎರಡು ಚಮಚ ಎಣ್ಣೆ ಹಾಕಿ, ಬಿಸಿ ಆದ ಮೇಲೆ ಕಟ್ ಮಾಡಿದ್ದ ಮೊಟ್ಟೆಯನ್ನು ಇಟ್ಟು 1 ನಿಮಿಷ ಬೇಯಿಸಿಕೊಳ್ಳಿ.
* ನಂತರ ಮೊಟ್ಟೆಯನ್ನು ಉಲ್ಟಾ ಮಾಡಿ ಸ್ವಲ್ಪ ಬ್ರೌನ್ ಬಣ್ಣ ಬರುವರೆಗೆ ಬೇಯಿಸಿಕೊಳ್ಳಿ.
* ಈಗ ಕಡಿಮೆ ಉರಿ ಇಟ್ಟು ಅದರ ಮೇಲೆ ಚಿಟಿಕೆ ಅರಿಶಿಣ ಉದುರುಸಿ.
* ಈಗ ಮೆಣಸು ಮತ್ತು ಉಪ್ಪನ್ನು ಪುಡಿ ಮಾಡಿಕೊಂಡು ಮೊಟ್ಟೆಯ ಮೇಲೆ ಉದುರಿಸಿ.
* ಮತ್ತೆ ಮೊಟ್ಟೆಯನ್ನು ಉಲ್ಟಾ ಮಾಡಿ ಮೆಣಸು ಮತ್ತು ಉಪ್ಪಿನ ಪುಡಿ ಉದುರಿಸಿ.
* ನಂತರ ಸಣ್ಣಗೆ ಕಟ್ ಮಾಡಿದ್ದ ಕೊತ್ತಂಬರಿ ಸೊಪ್ಪನ್ನು ಹಾಕಿದರೆ ಸ್ಪೈಸಿ ಸ್ಪೈಸಿಯಾಗಿ ಎಗ್ ಪೆಪ್ಪರ್ ಫ್ರೈ ತಿನ್ನಲು ಸಿದ್ಧ.

ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನದ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಆರೋಗ್ಯ

    ರಾತ್ರಿ ಮಲಗುವ ಮುಂಚೆ ಏಲಕ್ಕಿ ತಿಂದು ಬಿಸಿ ನೀರು ಕುಡಿದರೆ ಆಗುವ ಪ್ರಯೋಜನೆಗಳು. ತಿಳಿದರೆ ಶಾಕ್!

    ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…

  • ಸಿನಿಮಾ

    ಒಳ್ಳೆ ಹುಡುಗನ ಒಳ್ಳೆ ಕೆಲಸ….

    ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್‌ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….