ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.
ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ ಹಿಂದೆ ಜಗಳವಾಡಿಕೊಂಡು ಇಬ್ಬರು ಬೇರೆ ಬೇರೆಯಾಗಿ ವಾಸಿಸುತ್ತಿದ್ದರು.
ತನ್ನ ಗಂಡನಿಂದ ಬೇರೆಯಾದ ಬಳಿಕ ಭಾಗ್ಯಲಕ್ಷ್ಮಿ ಬೇರೆಯವರ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಆರೋಪಿ ರವಿ ತನ್ನ ಪತ್ನಿ ಇನ್ನೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ತಿಳಿದಿದೆ.
ರವಿ ಭಾನುವಾರ ಬೆಳಗ್ಗೆ ಪತ್ನಿಯ ಮನೆಗೆ ಹೋಗಿದ್ದಾನೆ. ಅಲ್ಲಿ ಭಾಗ್ಯಲಕ್ಷ್ಮಿ ಆಕೆಯ ಪ್ರಿಯತಮನ ಜೊತೆ ರೂಮಿನಲ್ಲಿ ಇದ್ದಳು. ಇದನ್ನು ನೋಡಿದ ರವಿ ರೂಮನ್ನು ಹೊರಗಿನಿಂದ ಲಾಕ್ ಮಾಡಿಕೊಂಡು ಮಕ್ಕಳನ್ನು ಮನೆಯಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ನಂತರ ರೂಮಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾನೆ.
ಇತ್ತ ಮಕ್ಕಳು ಈ ಬಗ್ಗೆ ನೆರೆಹೊರೆಯವರಿಗೆ ತಿಳಿಸಿದ್ದಾರೆ. ತಕ್ಷಣ ನೆರೆಹೊರೆಯವರು ಬಂದು ಬಾಗಿಲು ಮುರಿದು ಮನೆಯೊಳಗೆ ಹೋಗಿದ್ದಾರೆ. ಆಗ ಭಾಗ್ಯಲಕ್ಷ್ಮಿ ಗಂಭೀರವಾಗಿ ಸುಟ್ಟು ಹೋಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…