ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ.
ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ.
ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸುವ ಸಾಧ್ಯತೆಯೂ ಇದೆ. ಈ ಮಧ್ಯೆ ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿ ನಾಪತ್ತೆಯಾಗಿರುವ ಐಎಂಎ ಮಾಲೀಕನ ವಿರುದ್ಧ ರಸ್ತೆಗಿಳಿದಿದ್ದ ಮೋಸ ಹೋದವರು, ಧಿಡೀರ್ ಅಂತ ಶಾಸಕ ರೋಷನ್ ಬೇಗ್ ಮನೆಗೆ ಲಗ್ಗೆ ಇಟ್ಟಿದರು. ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪ್ರತಿಭಟನಾಕಾರರನ್ನ ಪೊಲೀಸರು ಮನವೊಲಿಸೋ ಯತ್ನ ಮಾಡಿದರು. ರೋಷನ್ ಬೇಗ್ ಮನೆಯಲ್ಲಿ ಇಲ್ಲ ಅನ್ನೋದು ತಿಳಿದು ಪ್ರತಿಭಟನಾಕಾರರು ಜಾಗ ಖಾಲಿ ಮಾಡಿದರು. ಶಾಸಕ ರೋಷನ್ ಬೇಗ್ ದೆಹಲಿಯಿಂದ ಬೆಂಗಳೂರಿಗೆ ಮರಳುತ್ತಿದ್ದು ಮುಂಜಾಗೃತ ಕ್ರಮವಾಗಿ ರೋಷನ್ ಬೇಗ್ ಮನೆ ಬಳಿ ಪೊಲೀಸ್ ಬೀಗಿ ಭದ್ರತೆ ಒದಗಿಸಲಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ 1,765 total views, 3 views today
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.