ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ.
ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ ಪಾಕಿಸ್ತಾನ ತಂಡ ಟೀಂ ಇಂಡಿಯಾ ವಿರುದ್ಧ 39 ರನ್‍ಗಳಿಂದ ಸೋಲನುಭವಿಸಿತ್ತು. ವಿಶ್ವಕಪ್‍ನಲ್ಲಿ ಇತ್ತಂಡಗಳೂ 4 ವರ್ಷ ಹಿಂದೆ 2015ರಲ್ಲಿ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಭಾರತ 76 ರನ್‍ಗಳಿಂದ ಗೆಲುವು ಸಾಧಿಸಿತ್ತು.1992ರಲ್ಲಿ ಭಾರತ-ಪಾಕ್ ಮೊದಲ ಬಾರಿಗೆ ವಿಶ್ವಕಪ್‍ನಲ್ಲಿ ಪರಸ್ಪರ ಸೆಣಸಾಡಿತ್ತು. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 43 ರನ್‍ಗಳಿಂದ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ 54 ರನ್ ಗಳಿಸಿದ್ದರು. ಜೊತೆಗೆ 10 ಓವರ್ ನಲ್ಲಿ 37 ರನ್ ನೀಡಿ 1 ವಿಕೆಟ್ ಗಳಿಸಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಗಳಿಸಿದ್ದರು.
ವಿಶ್ವಕಪ್ 1999 – ಬೆಂಗಳೂರಲ್ಲಿ ಸಿಧು, ವೆಂಕಟೇಶ್ ಪ್ರಸಾದ್, ಕುಂಬ್ಳೆ ಹೀರೋ: 1996ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‍ನ ಕಾರ್ಟರ್ ಫೈನಲ್ ಅಹರ್ನಿಶಿ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 39 ರನ್‍ಗಳಿಂದ ಪರಾಭವಗೊಳಿಸಿತ್ತು. ಈ ಪಂದ್ಯದಲ್ಲಿ 93 ರನ್ ಗಳಿಸಿದ ನವಜೋತ್ ಸಿಂಗ್ ಸಿಧು ಪಂದ್ಯ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು. ಸಚಿನ್ 31, ಸಂಜಯ್ ಮಾಂಜ್ರೇಕರ್ 20, ಮೊಹಮ್ಮದ್ ಅಜರುದ್ದೀನ್ 20, ವಿನೋದ್ ಕಾಂಬ್ಳಿ 24, ಅಜಯ್ ಜಡೇಜ 45, ಅನಿಲ್ ಕುಂಬ್ಳೆ 10, ಜಾವಗಲ್ ಶ್ರೀನಾಥ್ 12, ನಯನ್ ಮೊಂಗಿಯ 3 ರನ್ ಗಳಿಸಿ ನಿಗದಿತ 50 ಓವರ್ ಮುಗಿದಾಗ ಭಾರತ 8 ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿತ್ತು.
ಪಾಕಿಸ್ತಾನದ ಪರವಾಗಿ ವಖಾರ್ ಯೂನಿಸ್ ಹಾಗೂ ಮುಷ್ತಾಖ್ ಅಹ್ಮದ್ ತಲಾ 2 ವಿಕೆಟ್ ಗಳಿಸಿದರೆ. ಅತಾ-ಉರ್-ರೆಹ್ಮಾನ್, ಆಖಿಬ್ ಜಾವೇದ್, ಅಮೀಲ್ ಸೊಹೇಲ್ ತಲಾ 1 ವಿಕೆಟ್ ಗಳಿಸಿದರು. ವಖಾರ್ ಯೂನಿಸ್ ಹಾಗೂ ಆಖಿಬ್ ಜಾವೇದ್ 10 ಓವರ್‍ಗಳಲ್ಲಿ ತಲಾ 67 ರನ್ ನೀಡಿ ದುಬಾರಿ ಬೌಲರ್ ಎನಿಸಿದರು.ವಿಶ್ವಕಪ್ 2015: ಆಸ್ಟ್ರೇಲಿಯಾದ ಆಡಿಲೇಡ್‍ನಲ್ಲಿ 2015ರಲ್ಲಿ ಭಾರತ ನೀಡಿದ 300 ರನ್ ಟಾರ್ಗೆಟ್ ಗೆ ಉತ್ತರವಾಗಿ ಬ್ಯಾಟಿಂಗ್ ಮಾಡಲು ಕಣಕ್ಕಿಳಿದ 224 ರನ್‍ಗಳಿಗೆ ಆಲೌಟಾಗಿ ಭಾರತಕ್ಕೆ 76 ರನ್‍ಗಳ ಗೆಲುವು ನೀಡಿತು. ಈ ಪಂದ್ಯದಲ್ಲಿ 107 ರನ್ ಗಳಿಸಿ ಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಟ ಪ್ರಶಸ್ತಿ ಪಡೆದಿದ್ದರು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…