ಸುದ್ದಿ

ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

150

ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್​ಕೌಂಟರ್​ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • ಸುದ್ದಿ

    ಹೆತ್ತ ತಾಯಿಗೆ ಈ ಮಗ ಮಾಡಿರುವ ಕೆಲಸ ಕೇಳಿದ್ರೆ ನೀವೂ ಬೆಚ್ಚಿ ಬೀಳ್ತೀರಾ..

    ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…