News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಧಾಮುರ್ತಿ ದಂಪತಿಯ ಮಗ. ಇವರ ಮದುವೆ ಏಗೆ ನಡೆಯಿತು ಗೊತ್ತಾ.!

46

ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು,  ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ ಆಫ್ ಇಂಡಿಯಾ’ವನ್ನು ಸ್ಥಾಪಿಸಿದ್ದರು.

ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಅವರ ಮಗನ ಮದುವೆ ಸೋಮವಾರ ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆದಿದೆ. ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ಮದುವೆಯಾಗಿದ್ದಾರೆ. ಮದುವೆಯಲ್ಲಿ ರೋಹನ್ ಕಪ್ಪು ಬಣ್ಣದ ಪ್ಯಾಂಟ್ ಹಾಕಿ ಪ್ಲೇನ್ ಕುರ್ತಾ ಧರಿಸಿದರೆ, ಅರ್ಪಣಾ ನಳಿ ಬಣ್ಣದ ಲೆಹೆಂಗಾ ಧರಿಸಿ ಮದುವೆಯಲ್ಲಿ ಮಿಂಚಿದ್ದಾರೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಇವರ ಪರಿಚಯ ಸ್ನೇಹಕ್ಕೆ ತಿರುಗಿ ಬಳಿಕ ಪ್ರೀತಿಯಾಗಿ ಮನೆಯವರ ಒಪ್ಪಿಗೆ ಮೆರಿಗೆ ಮದುವೆಯಾಗಿದ್ದಾರೆ. ಈ ಮದುವೆ ಸರಳವಾಗಿ ನಡೆದಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರು ಭಾಗಿಯಾಗಿದ್ದರು. ಇವರ ಆರತಕ್ಷತೆಗೆ ಗಾಯಕಿ ಬಾಂಬೆ ಜಯಶ್ರೀ ಕೂಡ ಅತಿಥಿಯಾಗಿ ಆಗಮಿಸಿದ್ದರು. 

ಕಳೆದ ಎರಡು ಸಹಸ್ರಮಾನಗಳಿಂದ ಭಾರತದ ಶ್ರೇಷ್ಠ ಸಾಹಿತ್ಯ ಕೃತಿಗಳನ್ನು ವಿಶ್ವದ ಅತಿದೊಡ್ಡ ಓದುಗರವರೆಗೆ ಪ್ರಸ್ತುತಪಡಿಸುವುದು ಅವರ ಗುರಿಯಾಗಿದೆ. ರೋಹನ್ ಅವರಿಗೆ ಇದು ಎರಡನೇ ಮದುವೆಯಾಗಿದ್ದು, 2011ರ ಜೂನ್‍ನಲ್ಲಿ ಟಿವಿಎಸ್ ಮೋಟಾರ್ಸ್ ಅಧ್ಯಕ್ಷ ವೇಣು ಶ್ರೀನಿವಾಸ್ ಅವರ ಪುತ್ರಿ ಲಕ್ಷ್ಮಿ ವೇಣು ಅವರನ್ನು ಮದುವೆಯಾಗಿದ್ದರು. ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಬಂದ ಹಿನ್ನೆಲೆಯಲ್ಲಿ 2013ರಿಂದ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದರು ಎಂದು ವರದಿಯಾಗಿತ್ತು. ಬಳಿಕ 2015ರ ನವೆಂಬರಿನಲ್ಲಿ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದರು.

About the author / 

sullu suddi

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ