ಕ್ರೀಡೆ

ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

380

ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ