ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ಅಲ್ಲದೆ ಈ ಖುಷಿ ಕ್ಷಣಗಳ ವಿಡಿಯೋವನ್ನು ಸೆರೆಹಿಡಿದಿದ್ದು, ವಿಡಿಯೋಗೆ `ಸವಿ ಸವಿ ನೆನಪು’ ಎಂಬ ಮೈ ಆಟೋಗ್ರಾಫ್ ಚಿತ್ರದ ಹಾಡನ್ನು ಹಾಕಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.
ನೆನಪಿಗೆ ಬಂದ ಆ ಬಾಲ್ಯದ ದಿನಗಳು. ನಿನ್ನೆ ಕುಟುಂಬದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಂಧ್ರಪ್ರದೇಶದಲ್ಲಿರುವ ನಮ್ಮ ಮಾವನವರ ಊರಿಗೆ ತೆರಳಿದ್ದೆ. ಅದೇ ಸಮಯದಲ್ಲಿ ನಮ್ಮ ಮಾವನವರ ತೋಟಕ್ಕೆ ನನ್ನ ಧರ್ಮಪತ್ನಿ ಲಕ್ಷ್ಮಿ ಅರುಣಾ ಜೊತೆಗೆ ಭೇಟಿ ಕೊಟ್ಟಿದ್ದೆ.
ತೋಟದಲ್ಲಿ 27 ವರ್ಷಗಳ ಹಿಂದೆ ನೆಟ್ಟಿದ್ದ ಮಾವಿನ ಗಿಡಗಳು ಹೆಮ್ಮರವಾಗಿ ಬೆಳೆದು ಮಾವಿನ ಹಣ್ಣುಗಳಿಂದ ತುಂಬಿಕೊಂಡ ದೃಶ್ಯ ಮನ ಸೆಳೆಯಿತು. ಕೂಡಲೇ ನಾನೇ ಮರವನ್ನು ಹತ್ತಿ ಮಾವಿನ ಹಣ್ಣನ್ನು ಕಿತ್ತು ನನ್ನ ಶ್ರೀಮತಿಗೆ ನೀಡಿದೆ. ಮರವೇರಿ ಇಳಿದ ತಕ್ಷಣ ಬಾಲ್ಯದ ದಿನಗಳಲ್ಲಿ ಸ್ನೇಹಿತರೊಂದಿಗೆ ಸೇರಿ ಮರವೇರಿ ಆಡುತ್ತಿದ್ದ ಆಟಗಳು, ಜೊತೆಯಲ್ಲಿದ್ದ ಸ್ನೇಹಿತರು ನೆನಪಿಗೆ ಬಂದರು ಎಂದು ಬರೆದು ವಿಡಿಯೋದೊಂದಿಗೆ ಅಪ್ಲೋಡ್ ಮಾಡಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..