ರಾಜಕೀಯ

ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

477

ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ..!ಇವರು ಭಾರತದ ಪರಿಶುದ್ಧ ಬಡ ಮುಖ್ಯಮಂತ್ರಿ..!

    ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….

  • ವ್ಯಕ್ತಿ ವಿಶೇಷಣ

    ಈಗ 5 ರೂಪಾಯಿಗೆ ವೈದ್ಯಕೀಯ ಸೇವೆ ಸಿಗುತ್ತೆ …!ತಿಳಿಯಲು ಇದನ್ನು ಓದಿ..

    ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

  • ಸುದ್ದಿ

    ಮೈಸೂರು ದಸರಾ ವೇದಿಕೆಯಲ್ಲೇ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಹಾಗು ನಿವೇದಿತಾ….!

    ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….

  • ಸಿನಿಮಾ

    ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

    ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading