ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು.
ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ ಮುಂಜಾಗೃತೆ ಕ್ರಮವಾಗಿ ಚಾಮಲಾಪುರ ಗ್ರಾಮದಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಬಂಗಲೆಯೊಂದರ ಕಾಂಪೌಂಡ್ನಲ್ಲಿ ಪೊಲೀಸರು ಕೂಡಿ ಹಾಕಿದ್ದರು.
ಬೆಳ್ಳೂರು ಗ್ರಾಮ ಅತಿಸೂಕ್ಷ್ಮ ಪ್ರದೇಶ ಆಗಿರುವುದರಿಂದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾದಾಗ ಯಾವುದೇ ಸಮಸ್ಯೆ ಆಗಬಾರದೆಂದು, ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಸುಮಾರು ಒಂದು ಕಿಲೋಮೀಟರ್ ರಸ್ತೆಯುದ್ದಕ್ಕೂ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಅಲ್ಲದೆ ಸುಮಲತಾ ಅವರು ಹೋಗುವಾಗ ವಿರೋಧವಾಗಿ ಜೈಕಾರ ಕೂಗದಂತೆ ಜೆಡಿಎಸ್ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು.
ಸುಮಲತಾ ಅವರು ಚಾಮಲಾಪುರ ಮಾರ್ಗದಲ್ಲಿ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಇದೇ ಸ್ಥಳದಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಕೂಡ ಐದು ನಿಮಿಷ ಗೇಟಿನಲ್ಲೇ ಪೊಲೀಸರು ತಡೆಹಿಡಿದಿದ್ದರು. ಈ ವೇಳೆ ಪೊಲೀಸರನ್ನು ಜೆಡಿಎಸ್ ಶಾಸಕ ಸುರೇಶ್ ಗೌಡ ತರಾಟೆಗೆ ತೆಗೆದುಕೊಂಡ ಬಳಿಕ ನಿಖಿಲ್ ಅವರ ವಾಹನವನ್ನು ಪೊಲೀಸರು ಬಿಟ್ಟು ಕಳುಹಿಸಿದರು.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…