ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ.
ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆಯೆ? ಈ ಪ್ರಶ್ನೆಗೆ ಪ್ರಖ್ಯಾತ ಪೌಷ್ಟಿಕ ತಜ್ಞ ರುಜುತಾ ದಿವೆಕರ್, ಗೋಡಂಬಿ ಮೂಲತಃ ಭಾರತ ಮತ್ತು ಆಫ್ರಿಕಾದ ಬೆಳೆ. ಇದು ಬದಾಮಿಯಂತೆ ದೇಹಕ್ಕೆ ಒಳ್ಳೆಯದು. ಗೋಡಂಬಿಯಲ್ಲಿ ಕೊಲೆಸ್ಟ್ರಾಲ್ ಅಂಶಗಳಿಲ್ಲ. ಗೋಡಂಬಿ ಎಂಬುದು ಪೋಷಕಾಂಶಗಳ ತವರುಮನೆ. ಇದು ಸಕ್ಕರೆ ಕಾಯಿಲೆ ಇರುವವರ ಪಾದಗಳಿಗೆ ಒಳ್ಳೆಯದು. ಬೊಗಸೆ ತುಂಬ ಗೋಡಂಬಿಗಳನ್ನು ಪ್ರತಿನಿತ್ಯ ಸೇವಿಸುವದರಿಂದ ಕಾಲು ಸೆಳೆತ ಇನ್ನಿಲ್ಲವಾಗುತ್ತದೆ. ಅಲ್ಲದೆ, ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನವಾಗಿಡಬಹುದು ಎನ್ನುತ್ತಾರೆ.ಒಂದು ಮೋಸಂಬಿ ಹಣ್ಣಿಗಿಂತ ಗೋಡಂಬಿ 5 ಪಟ್ಟು ಹೆಚ್ಚು ವಿಟಮಿನ್ ಸಿ ಹೊಂದಿರುತ್ತದೆ. ದೇಹದಲ್ಲಿನ ಉಷ್ಣಾಂಶ ಹೆಚ್ಚಿಸಲು ವಿಟಮಿನ್ ಸಿ ಉಪಯೋಗಕಾರಿ .
Ripe cashew nuts in woman’s hands
ಗೋಡಂಬಿಯ ನಾಲ್ಕು ಪ್ರಯೋಜನಗಳು
ಸಹಾಯಕವಾದ ಫೈಬರ್ಗಳನ್ನು ಹೊಂದಿದೆ ಗೋಡಂಬಿ ಅಥವಾ ಕ್ಯಾಶೀವ್ ನಟ್ಗಳಲ್ಲಿ ಆಹಾರದ ಫೈಬರ್ ಅಂಶ ಹೊಂದಿದ್ದು, ಇದನ್ನು ನಮ್ಮ ದೇಹ ಉತ್ಪಾದನೆ ಮಾಡದ ಕಾರಣ ಅದನ್ನು ಹೊರಗಿನಿಂದ ಸೇವಿಸಬೇಕಾಗುತ್ತದೆ. ಇದರಿಂದ ಜೀರ್ಣ ಶಕ್ತಿ ಹೆಚ್ಚಾಗಲಿದ್ದು, ಜೀರ್ಣಾಂಗ ಸಂಬಂಧಿ ರೋಗಗಳನ್ನು ಕಡಿಮೆ ಮಾಡುತ್ತದೆ.
ಹೃದಯ ರೋಗವನ್ನು ನಿಯಂತ್ರಣದಲ್ಲಿಡುತ್ತದೆ ಗೋಡಂಬಿ ಎಲ್ಡಿಎಲ್ ಕೊಲೆಸ್ಟರಾಲ್ ಅನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಎಚ್ಡಿಎಲ್ ಕೊಲೆಸ್ಟರಾಲ್ ಒಯ್ಯುವ ಸಾಮಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯ ರೋಗ ಬರುವ ಅಪಾಯವನ್ನು ತಗ್ಗಿಸುತ್ತದೆ. ಆದರೆ, ಉಪ್ಪು ಅಂಶ ಹೆಚ್ಚಿರುವ ಅಥವಾ ಹುರಿದ ಗೋಡಂಬಿಯಲ್ಲದಂತೆ ನೋಡಿಕೊಳ್ಳಿ.
ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಗೋಡಂಬಿಯಲ್ಲಿ ಒಮೆಗಾ 3 ಅಂಶವಿರುವುದರಿಂದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇನ್ನು, ಹಸಿವಾದಾಗ ಬೊಗಸೆಯಷ್ಟು ಗೋಡಂಬಿ ತಿಂದರೆ ಅದರಿಂದ ಹೆಚ್ಚು ಕಾಲ ಹೊಟ್ಟೆ ತುಂಬುವಂತೆಯೂ ನೋಡಿಕೊಳ್ಳುತ್ತದೆ.
ಕಣ್ಣಿಗೆ ಸೋಂಕು ಹರಡದಂತೆ ತಡೆಯಲು ಸಹಾಯ ಮಾಡುತ್ತದೆ ವಾತಾವರಣದಲ್ಲಿ ಹೆಚ್ಚು ಮಾಲಿನ್ಯವಿದ್ದರೂ ಸಹ ಗೋಡಂಬಿಯನ್ನುತಿನ್ನುವುದರಿಂದ ಕಣ್ಣಿಗೆ ಸೋಂಕು ಬರದಂತೆ ತಡೆಯುತ್ತದೆ. ಯಾಕೆಂದರೆ ಇದು ಪ್ರಬಲ ಆ್ಯಂಟಿಆಕ್ಸಿಡೆಂಟ್ ಪಿಗ್ಮೆಂಟ್ ಹೊಂದಿದೆ. ಹೀಗಾಗಿ, ರೆಟಿನಾ ಮೇಲೆ ರಕ್ಷಣಾತ್ಮಕ ಪದರವನ್ನು ಸೃಷ್ಟಿ ಮಾಡಲಿದ್ದು, ಇದರಿಂದ ಹಾನಿಕರ ಯುವಿ ಕಿರಣಗಳನ್ನು ತಡೆಯುತ್ತದೆ. ನಿಮ್ಮ ಚರ್ಮಕ್ಕೆ ಒಳ್ಳೆಯದು ಗೋಡಂಬಿ ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶ ಹೆಚ್ಚಿರುತ್ತದೆ. ಅಲ್ಲದೆ, ಪ್ರೋಟೀನ್ಗಳು ಹಾಗೂ ಸೆಲೆನಿಯಂ ಸೇರಿ ಆ್ಯಂಟಿಆಕ್ಸಿಡೆಂಟ್ಸ್ ಸಹ ಹೆಚ್ಚಿರುತ್ತದೆ.. ಅದರಿಂದ ನಿಮ್ಮ ಚರ್ಮಕ್ಕೆ ಒಳ್ಳೆಯದು. ಜತೆಗೆ, ಗೋಡಂಬಿ ತಿನ್ನುವುದಾಗಲೀ, ಗೋಡಂಬಿ ಎಣ್ಣೆಯನ್ನು ನೆತ್ತಿ ಮೇಲೆ ಹಚ್ಚಿಕೊಳ್ಳುವುದರಿಂದ ಚರ್ಮ ಹಾಗೂ ಕೂದಲಿಗೆ ಮೆಲಾನಿನ್ ಪಿಗ್ಮೆಂಟ್ ಉತ್ಪತ್ತಿಯಾಗಲು ನೆರವಾಗುತ್ತದೆ. ಇನ್ನೊಂದೆಡೆ, ಕೂದಲಿಗೆ ನಯವಾದ ವಿನ್ಯಾಸವನ್ನೂ ಇದು ನೀಡುತ್ತದೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಗೂಗಲ್ನ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ. ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್ ಅಪ್ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…