ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ.
ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ.
ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ ಕಾರಿನಿಂದ ಇಳಿದ ಶಿವಣ್ಣ ಅವರನ್ನು ಕಂಡು ಚೆಕ್ ಪೋಸ್ಟ್ ಅಧಿಕಾರಿಗಳು ಅಚ್ಚರಿಯಾಗಿದ್ದಾರೆ.
ಬಳಿಕ ಕಾರು ಪರಿಶೀಲನೆ ನಡೆಸಿದ್ದಾರೆ. ಬಿಗ್ ಸ್ಟಾರ್ ಆಗಿದ್ದರೂ ಕೂಡ ಶಿವಣ್ಣ ಜನಸಾಮಾನ್ಯರಂತೆ ಚುನಾವಣಾ ಸಿಬ್ಬಂದಿ ಕಾರು ತಪಾಸಣೆ ಮಾಡಲು ಸಹಕರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎನ್ನಲಾಗಿದೆ. ಶಿವಣ್ಣ ಅವರನ್ನು ಕಂಡು ಖುಷಿಯಾದ ಚುನಾವಣಾ ಸಿಬ್ಬಂದಿ ಅವರೊಂದಿಗೆ ಫೋಟೋ, ಸೆಲ್ಫಿ ತೆಗೆದುಕೊಂಡಿದ್ದಾರೆ. ಬಳಿಕ ಶಿವಣ್ಣ ಚಿತ್ರೀಕರಣಕ್ಕಾಗಿ ತೆರಳಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಗೀತಾ ಶಿವರಾಜಕುಮಾರ್ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಶಿವಣ್ಣ ಪ್ರಚಾರ ನಡೆಸಿದ್ದರು. ಈ ಬಾರಿ ಅವರು ಚುನಾವಣೆ ಪ್ರಚಾರದಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…