inspirational

ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

39

ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್.

ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ ಕಲಿಯುತ್ತಿದ್ದಾಳೆ. ಸಾಮಾನ್ಯವಾಗಿ ಸರ್ಕಾರಿ ಕೆಲಸದಲ್ಲಿ ಇರುವವರ ಮಕ್ಕಳನ್ನು ದುಬಾರಿ ಶಾಲೆಗಳಿಗೆ ಕಳುಹಿಸುತ್ತಾರೆ. ಆದರೆ ಸುಮನ್ ಅವರು ಸರ್ಕಾರಿ ಅಂಗನವಾಡಿಗೆ ಮಗಳನ್ನು ಸೇರಿಸಿರುವುದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಅಂಗನವಾಡಿ ಶಿಕ್ಷಕಿ ನೀತು ಮಾತನಾಡಿ, ಗ್ರಾಮೀಣ ಪೊಲೀಸ್ ಠಾಣೆಗೆ ಅಂಗನವಾಡಿ ಹತ್ತಿರವಾಗಿದೆ. ಸೋಮವಾರ ಎಸ್.ಪಿ ಅವರು ತಮ್ಮ ಮಗಳನ್ನು ಅಂಗನವಾಡಿಗೆ ದಾಖಲಿಸಿದ್ದಾರೆ. ಅವರ ಮಗಳು ಮಾತ್ರವಲ್ಲದೆ ಪೊಲೀಸ್ ಇನ್‍ಸ್ಪೆಕ್ಟರ್ ಮಗು ಸೇರಿದಂತೆ ಇತರೆ 5 ಮಂದಿ ಪೊಲೀಸ್ ಸಿಬ್ಬಂದಿಯ ಮಕ್ಕಳು ಕೂಡ ಇಲ್ಲಿ ದಾಖಲಾತಿ ಪಡೆದಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಎಸ್.ಪಿ ಸುಮನ್ ಅವರು ಮಗಳನ್ನು ಅಂಗನವಾಡಿಗೆ ಸೇರಿಸಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಬಗ್ಗೆ ತಿಳಿದ ಸಾಕಷ್ಟು ಮಂದಿ ಅಂಗನವಾಡಿಗೆ ಭೇಟಿ ಕೊಟ್ಟು ಖುಷಿ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಅಂಗನವಾಡಿ ಸಿಬ್ಬಂದಿ ತಿಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • ಉಪಯುಕ್ತ ಮಾಹಿತಿ

    ಕಪ್ಪು ದಾರ ಕಟ್ಟಿಕೊಂಡರೆ ಆಗುವ ಲಾಭಗಳು ಯಾವುವು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ..

    ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…