ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ ವಿಷ ಬೆರೆಸಿದ್ದ ಎನ್ನಲಾಗಿದೆ.

ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ದೊಡ್ಡಯ್ಯ, ಘಟನೆ ನಡೆದ ದಿನದಂದು ಪ್ರಸಾದಕ್ಕೆ ಕೀಟನಾಶಕ ಬೆರೆಸಿದ್ದ ಎಂದು ಹೇಳಲಾಗಿದ್ದು, ವಿಚಾರಣೆ ವೇಳೆ ಇದನ್ನು ಒಪ್ಪಿಕೊಂಡಿದ್ದಾನೆಂದು ತಿಳಿದುಬಂದಿದೆ.
ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥರಾಗಿ ಬೀಳುತ್ತಿದ್ದಂತೆಯೇ ಗಾಬರಿಗೊಂಡಿದ್ದ ದೊಡ್ಡಯ್ಯ, ತಾನು ಪ್ರಸಾದ ಸೇವಿಸದಿದ್ದರೂ ಅಸ್ವಸ್ಥಗೊಂಡವನಂತೆ ನಾಟಕವಾಡಿ ಆಸ್ಪತ್ರೆಗೆ ದಾಖಲಾಗಿದ್ದನ್ನೆನ್ನಲಾಗಿದೆ. ಆದರೆ ವೈದ್ಯರು ಚಿಕಿತ್ಸೆ ನೀಡಲು ಮುಂದಾದ ವೇಳೆ ದೇಹದಲ್ಲಿ ಯಾವುದೇ ವಿಷದ ಅಂಶ ಕಂಡು ಬಂದಿರಲಿಲ್ಲ. ಇದರ ಮಾಹಿತಿ ಪಡೆದ ಪೊಲೀಸರು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆಂದು ಹೇಳಲಾಗಿದೆ.

ಪ್ರಸಾದ ತಯಾರಿಸಿದ್ದ ಪುಟ್ಟಸ್ವಾಮಿ ಎಂಬಾತನು ವಿಷ ಬೆರೆಸಿದ ಈ ಕೃತ್ಯದಲ್ಲಿ ಪಾಲುದಾರನೆಂದು ಹೇಳಲಾಗಿದ್ದು, ಯಾರಿಗೂ ಅನುಮಾನ ಬರಬಾರದೆಂಬ ಕಾರಣಕ್ಕೆ ಸ್ವಂತ ತನ್ನ ಮಗಳಿಗೆ ವಿಷ ಮಿಶ್ರಿತ ಪ್ರಸಾದವನ್ನು ತಿನ್ನಿಸಿ ಆಕೆಯ ಸಾವಿಗೆ ಕಾರಣವಾಗಿದ್ದನ್ನೆನ್ನಲಾಗಿದೆ.

ಬಳಿಕ ತಾನೂ ಪ್ರಸಾದ ಸೇವಿಸಿದವನಂತೆ ನಾಟಕವಾಡಿ ಆಸ್ಪತ್ರೆಗೆ ದಾಖಲಾಗಿದ್ದ. ಆತನನ್ನೂ ಈಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವಾಲಯಕ್ಕೆ ಬರುತ್ತಿದ್ದ ಭಾರೀ ಆದಾಯವೇ ಇಂತಹುದೊಂದು ಹೀನಕೃತ್ಯಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…