ರಾಜಕೀಯ

ಪಕ್ಷೇತರ ಅಭ್ಯರ್ಥಿ,ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿಯಿಂದ ಗಂಭೀರ ಆರೋಪ..!

By admin

April 11, 2019

ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ  ಗಮನ ಸೆಳೆಯುತ್ತಿದೆ.

ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು.

ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಪರ ಮಂಡ್ಯದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಸುಮಲತಾ ಅಂಬರೀಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ, ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಆಸ್ಪತ್ರೆಗೆ ದಾಖಲಾಗುವ ಮೂಲಕ ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲು ಹೊಂಚು ಹಾಕುತ್ತಿದ್ದಾರೆ. ನಾವ್ಯಾರು ಇಂತಹ ಕುತಂತ್ರದ ರಾಜಕಾರಣ ಮಾಡುತ್ತಿಲ್ಲವೆಂದು ಹೇಳಿದ್ದಾರೆ.