ಸುದ್ದಿ

ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

169

ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಭಾಷಣವನ್ನು ನೋಡಿದೆ. ಅವರ ಮುಖದಲ್ಲಿ ನೋವಿನ ಛಾಯೆ ಕಾಣಿಸುತ್ತಿಲ್ಲ. ಜಿಲ್ಲೆಯ ಜನರ ನೋವು ಕೂಡ ಕಾಣಿಸುತ್ತಿಲ್ಲ. ಅವರದು ತಾಯಿ ಹೃದಯವೇ?

ಇನ್ನೊಬ್ಬರಿಂದ ಹಣ ಪಡೆದು ಮಜಾ ಮಾಡಿ ಎಂದು ಹೇಳುವ ಇವರ ಆಟ ಬಹಳ ದಿನ ನಡೆಯುವುದಿಲ್ಲ ಎಂದು ಹೇಳಿದ್ದಾರೆ. ಸಿಎಂ ಪರೋಕ್ಷವಾಗಿ  ಅಂಬರೀಶ್ ನಿಧನದ ನೋವು ಸುಮಲತಾ ಅವರಲ್ಲಿ ಕಾಣುತ್ತಿಲ್ಲ ಎಂದು ಹೇಳಿರುವುದಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ